
ದುಬೈ(ಸೆ.29): ಬಾಂಗ್ಲಾದೇಶ ವಿರುದ್ಧದ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ 3 ವಿಕೆಟ್ ರೋಚಕ ಗೆಲುವು ಸಾಧಿಸಿತು. ಈ ಮೂಲಕ ಭಾರತ 7ನೇ ಬಾರಿ ಏಷ್ಯಾಕಪ್ ಪ್ರಶಸ್ತಿ ಗೆದ್ದುಕೊಂಡಿತು.
ಗೆಲುವಿಗೆ 223 ರನ್ ಟಾರ್ಗೆಟ್ ಪಡೆದ ಟೀಂ ಇಂಡಿಯಾಗೆ ನಿರೀಕ್ಷಿತ ಒಪನಿಂಗ್ ಸಿಗಲಿಲ್ಲ. ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ 15 ರನ್ ಸಿಡಿಸಿ ಔಟಾದರು. ಇನ್ನು ಅಂಬಾಟಿ ರಾಯುಡು ಕೇವಲ 2 ರನ್ ಸಿಡಿಸಿ ಪೆವಿಲಿಯನ್ ಸೇರಿಕೊಂಡರು. ಆದರೆ ನಾಯಕ ರೋಹಿತ್ ಶರ್ಮಾ ಅಲ್ಪ ಹೋರಾಟ ನೀಡಿದರು.
ರೋಹಿತ್ ಶರ್ಮಾ 48 ರನ್ ಸಿಡಿಸಿ ನಿರ್ಗಮಿಸಿದರು. 83 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡ ತಂಡಕ್ಕೆ ಎಂ.ಎಸ್ ಧೋನಿ ಹಾಗೂ ದಿನೇಶ್ ಕಾರ್ತಿಕ್ ಆಸರೆಯಾದರು. ಆದರೆ ಕಾರ್ತಿಕ್ ಆಟ 37 ರನ್‌ಗಳಿಗೆ ಅಂತ್ಯವಾಯಿತು.
ಎಂ.ಎಸ್ ಧೋನಿ 36 ರನ್ ಸಿಡಿಸಿ ಔಟಾದರು. ಧೋನಿ ವಿಕೆಟ್ ಪತನವಾಗುತ್ತಿದ್ದಂತೆ ಟೀಂ ಇಂಡಿಯಾದಲ್ಲಿ ಆತಂಕ ಹೆಚ್ಚಾಯಿತು. ನಂತರ ಬಂದ ಕೇದಾರ್ ಜಾಧವ್ ಬಿರುಸಿನ ಹೊಡೆತಕ್ಕೆ ಮುಂದಾದರು. ಆದರೆ 19 ರನ್ ಸಿಡಿದ ಜಾಧವ್ ಇಂಜುರಿಗೆ ತುತ್ತಾಗಿ ಮೈದಾನದಿಂದ ಹೊರನಡೆದರು.
ರವೀಂದ್ರ ಜಡೇಜಾ ಹಾಗೂ ಭುವನೇಶ್ವರ್ ಕುಮಾರ್ ಜೊತೆಯಾಟದಿಂದ ಟೀಂ ಇಂಡಿಯಾ ಚೇತರಿಸಿಕೊಂಡಿತು. ಆದರೆ ಜಡೇಜಾ 23 ರನ್ ಸಿಡಿಸಿ ಔಟಾದರು. ಭುವನೇಶ್ವರ್ ಕುಮಾರ್ 21 ರನ್ ಸಿಡಿಸಿ ಪೆವಿಲಿಯನ್ ಸೇರಿದರು.
7 ವಿಕೆಟ್ ಕಳೆದುಕೊಂಡ ಟೀಂ ಇಂಡಿಯಾ ಗೆಲುವಿಗೆ ಅಂತಿಮ 11 ಎಸೆತದಲ್ಲಿ 9 ರನ್‌ಗಳು ಬೇಕಿತ್ತು. ಇಂಜುರಿಯಿಂದ ಚೇತರಿಸಿಕೊಂಡ ಮತ್ತೆ ಕಣಕ್ಕಿಳಿದ ಕೇದಾರ್ ಜಾದವ್ ಹಾಗೂ ಕುಲ್ದೀಪ್ ಯಾದವ್ ಜವಾಬ್ದಾರಿಯುತ ಆಟದಿಂದ ಅಂತಿಮ ಎಸೆತದಲ್ಲಿ ಭಾರತ 3 ವಿಕೆಟ್ ಗೆಲುವು ಸಾಧಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.