
ನವದೆಹಲಿ[ಆ.15]: ಇಂಗ್ಲೆಂಡ್ ವಿರುದ್ಧ ಮೊದಲೆರಡು ಟೆಸ್ಟ್‌ಗಳಲ್ಲಿ ಭಾರತ ತಂಡ ಹೀನಾಯ ಸೋಲು ಅನುಭವಿಸಿದ್ದೇ ಬಂತು, ತಂಡವನ್ನು ಪ್ರತಿಯೊಬ್ಬರು ಹಿಗ್ಗಾಮುಗ್ಗಾ ಟೀಕಿಸುತ್ತಿದ್ದಾರೆ. ಸೋಲಿನ ನೇರ ಪರಿಣಾಮ ಕೋಚ್ ರವಿ ಶಾಸ್ತ್ರಿ ಹಾಗೂ ನಾಯಕ ವಿರಾಟ್ ಕೊಹ್ಲಿ ಮೇಲೆ ಬೀರುತ್ತಿದೆ.
ಸೋಮವಾರವಷ್ಟೇ, ಬಿಸಿಸಿಐ ಶೀಘ್ರ ಕೊಹ್ಲಿ-ಶಾಸ್ತ್ರಿಗೆ ಬಿಸಿ ಮುಟ್ಟಿಸಲಿದೆ ಎನ್ನುವ ವರದಿಗಳು ಪ್ರಕಟಗೊಂಡಿದ್ದವು. ತಂಡಕ್ಕೆ ಸಕಲ ಸೌಕರ್ಯಗಳನ್ನು ಒದಗಿಸಿದ ಹೊರತಾಗಿಯೂ, ಕಳಪೆ ಪ್ರದರ್ಶನ ನೀಡುತ್ತಿರುವುದನ್ನುಒಪ್ಪಿಕೊಳ್ಳಲು ಸಾಧ್ಯವಿಲ್ಲ ಎನ್ನುವ ಸಂದೇಶ ಸುಪ್ರೀಂ ನೇಮಿತ ಬಿಸಿಸಿಐ ಆಡಳಿತ ಸಮಿತಿ ಶಾಸ್ತ್ರಿಗೆ ರವಾನಿಸಿದೆ ಎನ್ನಲಾಗಿದೆ.
‘ಮುಂಚಿತವಾಗಿಯೇ ತಂಡವನ್ನು ಇಂಗ್ಲೆಂಡ್‌ಗೆ ಕಳುಹಿಸಲಾಗಿತ್ತು. ಅಭ್ಯಾಸಕ್ಕೆ ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಹೋರಾಟ ತೋರದೆ ತಂಡ ಸೋಲುತ್ತಿರುವುದನ್ನು ನೋಡಲು ಸಾಧ್ಯವಿಲ್ಲ. ಈ ಬಗ್ಗೆ ನಿಮ್ಮೊಂದಿಗೆ ಚರ್ಚೆ ನಡೆಸಬೇಕಿದೆ’ ಎಂದು ಆಡಳಿತ ಸಮಿತಿ ಶಾಸ್ತ್ರಿಗೆ ತಿಳಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.