ಟೀಂ ಇಂಡಿಯಾಗೆ 245 ರನ್ ಟಾರ್ಗೆಟ್ ನೀಡಿದ ಇಂಗ್ಲೆಂಡ್

Published : Sep 02, 2018, 03:51 PM ISTUpdated : Sep 09, 2018, 09:38 PM IST
ಟೀಂ ಇಂಡಿಯಾಗೆ 245 ರನ್ ಟಾರ್ಗೆಟ್ ನೀಡಿದ ಇಂಗ್ಲೆಂಡ್

ಸಾರಾಂಶ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ 4ನೇ ದಿನ ಆರಂಭದಲ್ಲೇ ಟೀಂ ಇಂಡಿಯಾ ಪ್ರಾಬಲ್ಯ ಮೆರೆದಿದೆ. ಇಂಗ್ಲೆಂಡ್ ತಂಡವನ್ನ 2ನೇ ಇನ್ನಿಂಗ್ಸ್‌ನಲ್ಲಿ  ಆಲೌಟ್ ಮಾಡಿರುವ ಟೀಂ ಇಂಡಿಯಾ   ಇದೀಗ ಟಾರ್ಗೆಟ್ ಚೇಸ್ ಮಾಡಲು ಕಣಕ್ಕಿಳಿದಿದೆ. ಇಲ್ಲಿದೆ 4ನೇ ದಿನದ ಅಪ್‌ಡೇಟ್ಸ್.

ಸೌತಾಂಪ್ಟನ್(ಸೆ.02): ಭಾರತ ಹಾಗೂ ಇಂಗ್ಲೆಂಡ್ ನಡುವಿನ 4ನೇ ಟೆಸ್ಟ್ ಪಂದ್ಯ ಇದೀಗ ಅಂತಿಮ ಘಟ್ಟ ತಲುಪಿದೆ. ಸೌತಾಂಪ್ಟನ್ ಟೆಸ್ಟ್ ಪಂದ್ಯದಲ್ಲಿ ಭಾರತದ ಗೆಲುವಿಗೆ ಇಂಗ್ಲೆಂಡ್ 245 ರನ್ ಟಾರ್ಗೆಟ್ ನೀಡಿದೆ. 

8 ವಿಕೆಟ್ ನಷ್ಟಕ್ಕೆ 260 ರನ್‌ಗಳೊಂದಿಗೆ 4ನೇ ದಿನದಾಟ ಮುಂದುವರಿಸಿದೆ ಇಂಗ್ಲೆಂಡ್ ಮೊದಲ ಎಸೆತದಲ್ಲೇ ಸ್ಟುವರ್ಟ್ ಬ್ರಾಡ್ ವಿಕೆಟ್ ಕಳೆದುಕೊಂಡಿತು.  46 ರನ್ ಸಿಡಿಸಿದ ಸ್ಯಾಮ್ ಕುರ್ರನ್ ರನೌಟ್ ಆಗೋ ಮೂಲಕ ಇಂಗ್ಲೆಂಡ್  2ನೇ ಇನ್ನಿಂಗ್ಸ್‌ನಲ್ಲಿ 271 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಭಾರತದ ಗೆಲುವಿಗೆ 245 ರನ್ ಟಾರ್ಗೆಟ್ ನೀಡಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ 246 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಭಾರತ 273 ರನ್ ಸಿಡಿತ್ತು. ಹೀಗಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 27 ರನ್ ಮುನ್ನಡೆ ಪಡೆದುಕೊಂಡಿತ್ತು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ ತಂಡ ಪ್ರತಿನಿಧಿಸಿದ ಪಾಕಿಸ್ತಾನ ಕಬಡ್ಡಿ ಪಟು, ಇಸ್ಲಾಮಾಬಾದ್‌ನಲ್ಲಿ ಕೋಲಾಹಲ
ಐಪಿಎಲ್ ಹರಾಜಿನ ಬಳಿಕ 4 ಬಲಿಷ್ಠ ತಂಡ ಆಯ್ಕೆ ಮಾಡಿದ ಆರ್. ಅಶ್ವಿನ್; ಚೆನ್ನೈ ಸೂಪರ್ ಕಿಂಗ್ಸ್‌ ತಂಡಕ್ಕಿಲ್ಲ ಸ್ಥಾನ!