ಭಾರತ-ಇಂಗ್ಲೆಂಡ್ ಏಕದಿನ: 40 ರನ್ ಸಿಡಿಸಿ ಶಿಖರ್ ಧವನ್ ಔಟ್

First Published Jul 12, 2018, 9:58 PM IST
Highlights

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಆರಂಭದಲ್ಲೇ ಕುತೂಹಲ ಮೂಡಿಸಿದೆ. ಇಂಗ್ಲೆಂಡ್ ನೀಡಿದ 269 ರನ್ ಟಾರ್ಗೆಟ್ ಚೇಸ್ ಮಾಡಲು ಕಣಕ್ಕಿಳಿದ ಟೀಂ ಇಂಡಿಯಾ ಮೊದಲ ವಿಕೆಟ್ ಕಳೆದುಕೊಂಡಿದೆ. ಈ ಪಂದ್ಯದ ಅಪ್‌ಡೇಟ್ ಇಲ್ಲಿದೆ.

ನಾಟಿಂಗ್‌ಹ್ಯಾಮ್(ಜು.12): ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 269 ರನ್ ಗುರಿ ಬೆನ್ನಟ್ಟಲು ಕಣಕ್ಕಿಳಿದ ಟೀಂ ಇಂಡಿಯಾ ಮೊದಲ ವಿಕೆಟ್ ಕಳೆದುಕೊಂಡಿದೆ. ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ 40 ರನ್ ಸಿಡಿಸಿ ಔಟಾಗಿದ್ದಾರೆ. ಈ ಮೂಲಕ ಭಾರತಲ ಮೊದಲ ವಿಕೆಟ್ ಕಳೆದುಕೊಂಡಿದೆ.

59 ರನ್‌ಗೆ ಭಾರತದ ಮೊದಲ ವಿಕೆಟ್ ಪತನಗೊಂಡಿದೆ. ಟಿ20 ಸರಣಿಯಲ್ಲಿ ತಮ್ಮ 3ನೇ ಕ್ರಮಾಂಕವನ್ನ ಕನ್ನಡಿಗ ಕೆಎಲ್ ರಾಹುಲ್‌ಗೆ ಬಿಟ್ಟುಕೊಟ್ಟಿದ್ದ ನಾಯಕ ವಿರಾಟ್ ಕೊಹ್ಲಿ ಇದೀಗ ರಾಹುಲ್ ಬದಲು ತಾವೇ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದಾರೆ.

ಇದನ್ನು ಓದಿ: ಭಾರತ-ಇಂಗ್ಲೆಂಡ್ ಏಕದಿನ: 6 ವಿಕೆಟ್ ಕಬಳಿಸಿ ಕುಲದೀಪ್ ಬರೆದ ದಾಖಲೆ ಯಾವುದು?

ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 49.5 ಓವರ್‌ಗಳಲ್ಲಿ 268 ರನ್‌ಗೆ ಆಲೌಟ್ ಆಗಿತ್ತು.ಜೋಸ್ ಬಟ್ಲರ್ ಹಾಗೂ ಬೆನ್ ಸ್ಟೋಕ್ಸ್ ಅರ್ಧಶತಕ ಸಿಡಿಸಿ ಆಸರೆಯಾದರು.  ಕುಲದೀಪ್ ಯಾದವ್ 6 ವಿಕೆಟ್ ಕಬಳಿಸಿ ಮಿಂಚಿದ್ದರು. 

click me!