
ಓವಲ್(ಸೆ.07): ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನ ಉಭಯ ತಂಡಗಳು ದಿಟ್ಟ ಹೋರಾಟ ನೀಡುತ್ತಿದೆ. ಟಾಸ್ ಗೆದ್ದು ಬ್ಯಾಟಿಂಗ್ ಇಳಿದಿರುವ ಇಂಗ್ಲೆಂಡ್ ಮೊದಲ ವಿಕೆಟ್ ಕಳೆದುಕೊಂಡರು ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದೆ.
ವಿದಾಯದ ಪಂದ್ಯ ಆಡುತ್ತಿರುವ ಅಲಿಸ್ಟೈರ್ ಕುಕ್ ಅಂತಿಮ ಪಂದ್ಯದಲ್ಲಿ ಉತ್ತಮವಾಗಿ ಬ್ಯಾಟ್ ಬೀಸಿದ್ದಾರೆ. ಆದರೆ ಮತ್ತೊರ್ವ ಆರಂಭಿಕ ಕೆಟನ್ ಜೆನ್ನಿಂಗ್ಸ್ 23 ರನ್ ಸಿಡಿಸಿ ಔಟಾದರು.
ಬ್ಯಾಟಿಂಗ್ ಆರ್ಡರ್‌ನಲ್ಲಿ ಬಡ್ತಿ ಪಡೆದು ಕಣಕ್ಕಿಳಿದ ಮೊಯಿನ್ ಹಾಗೂ ಅಲಿಸ್ಟೈರ್ ಕುಕ್ ತಂಡಕ್ಕೆ ಆಸರೆಯಾಗಿದ್ದಾರೆ. ಭೋಜನವಿರಾಮದ ವೇಳೆಗೆ ಇಂಗ್ಲೆಂಡ್ 1 ವಿಕೆಟ್ ನಷ್ಟಕ್ಕೆ 68 ರನ್ ಸಿಡಿಸಿದೆ. ಭಾರತದ ಪರ ರವೀಂದ್ರ ಜಡೇಜಾ ಒಂದು ವಿಕೆಟ್ ಕಬಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.