ಭಾರತ-ಇಂಗ್ಲೆಂಡ್ ಟೆಸ್ಟ್: ಟೀಂ ಇಂಡಿಯಾಗೆ ಮತ್ತೊಂದು ಆಘಾತ

By Web DeskFirst Published Aug 17, 2018, 3:14 PM IST
Highlights

ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಅಂತಿಮ ಕಸರತ್ತು ನಡೆಸುತ್ತಿದೆ. ಆದರೆ ಇದಕ್ಕೂ ಮುನ್ನ ಭಾರತ ತಂಡದ ಇಂಜುರಿ ಲಿಸ್ಟ್ ಮಾತ್ರ ಬೆಳೆಯುತ್ತಿದೆ. ಇದೀಗ ವೈದ್ಯರ ವರದಿ ಪ್ರಕಾರ ಭಾರತದ ಸ್ಟಾರ್ ಪ್ಲೇಯರ್  ಇಂಗ್ಲೆಂಡ್ ವಿರುದ್ಧದ ಮುಂಬರುವ ಎಲ್ಲಾ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಲಂಡನ್(ಆ.17): ಇಂಗ್ಲೆಂಡ್ ವಿರುದ್ಧದ ಆರಂಭಿಕ 2 ಟೆಸ್ಟ್ ಪಂದ್ಯ ಸೋತಿರುವ ಟೀಂ ಇಂಡಿಯಾ ಇದೀಗ 3ನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಇಂಜುರಿ ಸಮಸ್ಯೆ ಆತಂಕಕ್ಕೆ ಕಾರಣವಾಗಿದೆ. 

ನಾಯಕ ವಿರಾಟ್ ಕೊಹ್ಲಿ ಬೆನ್ನು ನೋವಿನಿಂದ ಚೇತರಿಸಿಕೊಂಡಿದ್ದ, 3ನೇ ಟೆಸ್ಟ್ ಪಂದ್ಯದಲ್ಲಿ ಆಡೋದು ಬಹುತೇಕ ಖಚಿತವಾಗಿದೆ. ಆದರೆ ಈಗಾಗಲೇ ಆರಂಭಿಕ 3 ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ವೇಗಿ ಭುವನೇಶ್ವರ್ ಕುಮಾರ್ ಅಂತಿಮ 2 ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ.

ಇಂಜುರಿ ಸಮಸ್ಯೆಯಿಂದ ಭುವನೇಶ್ವರ್ ಕುಮಾರ್ ಇಂಗ್ಲೆಂಡ್ ವಿರುದ್ಧದ 3 ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದರು. ಇಷ್ಟೇ ಅಲ್ಲ ಆಂಗ್ಲರ ವಿರುದ್ಧದ ಅಂತಿಮ 2 ಟೆಸ್ಟ್ ಪಂದ್ಯಕ್ಕೆ ಇಂಜುರಿಯಿಂದ ಚೇತರಿಸಿಕೊಂಡು ಕಣಕ್ಕಿಳಿಯೋ ಸೂಚನೆ ನೀಡಿದ್ದರು. ಆದರೆ ಇದೀಗ ಭುವಿ ಸಂಪೂರ್ಣ ಚೇತರಿಸಿಕೊಳ್ಳದ ಕಾರಣ ಅಂತಿಮ 2 ಪಂದ್ಯಕ್ಕೂ ಅಲಭ್ಯರಾಗಿದ್ದಾರೆ.

ಭುವನೇಶ್ವರ್ ಕುಮಾರ್ ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಆಕಾಡೆಮಿಯಲ್ಲಿ ಫಿಸಿಯೋ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಆದರೆ ಭುವಿ ಅಲಭ್ಯತೆ ಟೀಂ ಇಂಡಿಯಾಗೆ ಹೊಡೆತ ನೀಡಿರುವುದಂತು ನಿಜ.
 

click me!