ರಾಹುಲ್ ಅದ್ಭುತ ಕ್ಯಾಚ್- ಆಂಗ್ಲರ 2ನೇ ವಿಕೆಟ್ ಪತನ

By Web DeskFirst Published Sep 1, 2018, 4:31 PM IST
Highlights

ಭಾರತ ಹಾಗೂ ಇಂಗ್ಲೆಂಡ್ ನಡುವಿನ 4ನೇ ಟೆಸ್ಟ್ ಪಂದ್ಯದ ತೃತೀಯ ದಿನದಾಟ ಆರಂಭಗೊಂಡಿದೆ. ಭಾರತಕ್ಕೆ ತಿರುಗೇಟು ನೀಡಲು ಸಜ್ಜಾಗಿರುವ ಆತಿಥೇಯರು ಇದೀಗ 2ನೇ ಇನ್ನಿಂಗ್ಸ್ ಮುಂದುವರಿಸಿದ್ದಾರೆ. ಇಲ್ಲಿದೆ ತೃತೀಯ ದಿನದಾಟದ ಅಪ್‌ಡೇಟ್ಸ್.

ಸೌತಾಂಪ್ಟನ್(ಸೆ.01): ಭಾರತ ವಿರುದ್ಧದ 4ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಮತ್ತೆ ಕುಸಿತ ಕಂಡಿದೆ. 3ನೇ ದಿನದಾಟದಲ್ಲಿ 2ನೇ ಇನ್ನಿಂಗ್ಸ್ ಮುಂದುವರಿಸಿದ ಇಂಗ್ಲೆಂಡ್ ಇದೀಗ 2ನೇ ವಿಕೆಟ್ ಕಳೆದುಕೊಂಡಿದೆ.

ಕಳಪೆ ಫಾರ್ಮ್‌ನಲ್ಲಿರುವ ಆಲಿಸ್ಟೈರ್ ಕುಕ್ ಮತ್ತೆ ನಿರಾಸೆ ಅನುಭವಿಸಿದ್ದಾರೆ. 12 ರನ್ ಸಿಡಿಸಿ ಕುಕ್ ಪೆವಿಲಿಯನ್ ಸೇರಿದರು. ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ಪಡೆದು ಕಣಕ್ಕಿಳಿದ ಮೊಯಿನ್ ಆಲಿ 9 ರನ್ ಸಿಡಿಸಿ ಇಶಾಂತ್‌ಗೆ ವಿಕೆಟ್ ಒಪ್ಪಿಸಿದರು.

ಕೆಎಲ್ ರಾಹುಲ್ ಹಿಡಿದ ಅದ್ಭುತ ಕ್ಯಾಚ್‌ನಿಂದ ಮೊಯಿನ್ ಆಲಿ ಆಟ ಅಂತ್ಯಗೊಳಿಸಿದರು. ಹೀಗಾಗಿ ಇಂಗ್ಲೆಂಡ್ 33 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡಿದೆ. ಸದ್ಯ ಕೆಟನ್ ಜೆನ್ನಿಂಗ್ಸ್ ಹಾಗೂ ನಾಯಕ ಜೋ ರೂಟ್ ಆಸರೆಯಾಗಿದ್ದಾರೆ.

click me!