ಸಂಜಯ್ ಮಂಜ್ರೇಕರ್‌ನ್ನ ತರಾಟೆಗೆ ತೆಗೆದಕೊಂಡ ಫ್ಯಾನ್ಸ್!

Published : Aug 05, 2018, 02:38 PM IST
ಸಂಜಯ್ ಮಂಜ್ರೇಕರ್‌ನ್ನ ತರಾಟೆಗೆ ತೆಗೆದಕೊಂಡ ಫ್ಯಾನ್ಸ್!

ಸಾರಾಂಶ

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಹಲವು ಬಾರಿ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಇದೀಗ ನಾಯಕ ವಿರಾಟ್ ಕೊಹ್ಲಿಯನ್ನ ಹೊಗಳೋ ಭರದಲ್ಲಿ ಮತ್ತೆ ಎಡವಟ್ಟು ಮಾಡಿಕೊಂಡಿದ್ದಾರೆ.  

ಎಡ್ಜ್‌ಬಾಸ್ಟನ್(ಆ.05): ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಗ ಸೋಲಿನ ಬಳಿಕ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಮಾಡಿರೋ ಟ್ವೀಟ್‌ಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಭಾರತ ಸೋಲಿನ ಬಳಿಕ ಮಂಜ್ರೇಕರ್ ಟ್ವಿಟ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ತಂಡ ಹಾಗೂ ವ್ಯಕ್ತಿ ನಡುವಿನ ಹೋರಾಟದಲ್ಲಿ ಯಾವಾಗಲು ತಂಡವೇ ಗೆಲ್ಲಲಿದೆ ಎಂದು ಟ್ವೀಟ್ ಮಾಡಿದ್ದರು. 

 

 

ಟ್ವೀಟ್ ಮೂಲಕ ಸಂಜಯ್ ಮಂಜ್ರೇಕರ್, ಟೀಂ ಇಂಡಿಯಾದಲ್ಲಿ ನಾಯಕ ವಿರಾಟ್ ಕೊಹ್ಲಿ, ಇಂಗ್ಲೆಂಡ್ ವಿರುದ್ಧ ಹೋರಾಟ  ಮಾಡಿದ್ದರು. ಉಳಿದ ಸದಸ್ಯರು ಯಾರೂ ಹೋರಾಟ ಮಾಡಿಲ್ಲ ಎಂದು ಸೂಚ್ಯವಾಗಿ ಹೇಳಿದ್ದರು.

ಮಂಜ್ರೇಕರ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಅಭಿಮಾನಿಗಳು, ಆರ್ ಅಶ್ವಿನ್ ಹಾಗೂ ಇಶಾಂತ್ ಶರ್ಮಾ ಕೂಡ ಹೋರಾಟ ಮಾಡಿದ್ದಾರೆ. ಕೇವಲ ಕೊಹ್ಲಿಯನ್ನ ಹೊಗಳುವುದು ಸರಿಯಲ್ಲ ಎಂದು ಆಕ್ರೋಶ  ವ್ಯಕ್ತಪಡಿಸಿದ್ದಾರೆ. ಮಂಜ್ರೇಕರ್ ಟ್ವೀಟ್‌ಗೆ ಅಭಿಮಾನಿಗಳ ಪ್ರತಿಕ್ರಿಯೆ ಇಲ್ಲಿದೆ.

 

 

 

 

 

;

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026: ಮತ್ತೆ ಘರ್ಜಿಸಲು ರೆಡಿಯಾದ RCB ಐದು ಹುಲಿಗಳಿವು!
14 ಕಿಲೋಮೀಟರ್ ಸೈಕಲ್‌ನಲ್ಲಿ ಸ್ಟೇಡಿಯಂಗೆ ಬರುತ್ತಿದ್ದ ಆಟಗಾರನಿಗೆ ಸಿಕ್ತು 14 ಕೋಟಿ ನಗದು! ಇದು ಐಪಿಎಲ್ ಜಾದೂ