
ಸೌತಾಂಪ್ಟನ್(ಸೆ.01): ಭಾರತ ವಿರುದ್ಧದ 4ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ ಚೇತರಿಕೆ ಕಂಡಿದ್ದ ಇಂಗ್ಲೆಂಡ್ ಇದೀಗ 3ನೇ ವಿಕೆಟ್ ಕಳೆದುಕೊಂಡಿದೆ. 3ನೇ ದಿನದಾಟದಲ್ಲಿ ಇನ್ನಿಂಗ್ಸ್ ಮುಂದುವರಿಸಿದ ಇಂಗ್ಲೆಂಡ್ ಆರಂಭದಲ್ಲೇ 2 ವಿಕೆಟ್ ಕಳೆದುಕೊಂಡಿತ್ತು.
ಕಳಪೆ ಫಾರ್ಮ್‌ನಲ್ಲಿರುವ ಆಲಿಸ್ಟೈರ್ ಕುಕ್ ಮತ್ತೆ ನಿರಾಸೆ ಅನುಭವಿಸಿದರು. 12 ರನ್ ಸಿಡಿಸಿ ಕುಕ್ ಪೆವಿಲಿಯನ್ ಸೇರಿದರು. ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ಪಡೆದು ಕಣಕ್ಕಿಳಿದ ಮೊಯಿನ್ ಆಲಿ 9 ರನ್ ಸಿಡಿಸಿ ಇಶಾಂತ್‌ಗೆ ವಿಕೆಟ್ ಒಪ್ಪಿಸಿದರು.
ಕೆಟನ್ ಜೆನ್ನಿಂಗ್ಸ್ ಹಾಗೂ ನಾಯಕ ಜೋ ರೂಟ್ ಜೊತೆಯಾಟದಿಂದ ಇಂಗ್ಲೆಂಡ್ ಚೇತರಿಕೆ ಕಂಡಿತ್ತು. ಆದರೆ ಜೆನ್ನಿಂಗ್ಸ್ 36 ರನ್ ಸಿಡಿಸಿ ಮೊಹಮ್ಮದ್ ಶಮಿಗೆ ವಿಕೆಟ್ ಒಪ್ಪಿಸಿದರು. ಭೋಜನ ವಿರಾಮದ ವೇಳೆಗೆ ಇಂಗ್ಲೆಂಡ್ 92ರನ್‌ಗಳಿಗೆ 3ನೇ ವಿಕೆಟ್ ಕಳೆದುಕೊಂಡು ಬ್ಯಾಟಿಂಗ್ ಮುಂದುವರಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.