3ನೇ ಟೆಸ್ಟ್ ಪಂದ್ಯಕ್ಕೆ ಕಮ್‌ಬ್ಯಾಕ್ ಮಾಡ್ತಾರ ಶಿಖರ್ ಧವನ್?

Published : Aug 15, 2018, 05:38 PM ISTUpdated : Sep 09, 2018, 08:36 PM IST
3ನೇ ಟೆಸ್ಟ್ ಪಂದ್ಯಕ್ಕೆ ಕಮ್‌ಬ್ಯಾಕ್ ಮಾಡ್ತಾರ ಶಿಖರ್ ಧವನ್?

ಸಾರಾಂಶ

ಕಳಪೆ ಪ್ರದರ್ಶನದಿಂದ ಆಡುವ ಹನ್ನೊಂದರ ಬಳಗದಿಂದ ಹೊರಬಿದ್ದಿರುವ ಶಿಖರ್ ಧವನ್ ಇದೀಗ 3ನೇ ಟೆಸ್ಟ್ ಪಂದ್ಯಕ್ಕೆ ಕಮ್‌ಬ್ಯಾಕ್ ಮಾಡೋ ವಿಶ್ವಾಸದಲ್ಲಿದ್ದಾರೆ. ಇದಕ್ಕಾಗಿ ಧವನ್ ಕಸರತ್ತು ಆರಂಭಿಸಿದ್ದಾರೆ.  

ಲಂಡನ್(ಆ.15): ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ ಶಿಖರ್ ಧವನ್ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿಯಬೇಕಾಯಿತು. ಕಳಪೆ ಫಾರ್ಮ್‌ನಲ್ಲಿರು ಶಿಖರ್ ಧವನ್ 3ನೇ ಟೆಸ್ಟ್ ಪಂದ್ಯಕ್ಕೆ ಕಮ್‌ಬ್ಯಾಕ್ ಮಾಡಲು ಕಸರತ್ತು ಆರಂಭಿಸಿದ್ದಾರೆ.

ಶಿಖರ್ ಧವನ್ ಸೇರಿದಂತೆ ಇಂಗ್ಲೆಂಡ್ ವಿರುದ್ಧ  ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ ಭಾರತ ಆರಂಭಿಕ 2 ಪಂದ್ಯಗಳನ್ನ ಸೋತು ಸರಣಿಯಲ್ಲಿ 0-2 ಹಿನ್ನಡೆಯಲ್ಲಿದೆ. ಇದೀಗ 3ನೇ ಟೆಸ್ಟ್ ಪಂದ್ಯ ಕೊಹ್ಲಿ ಸೈನ್ಯಕ್ಕೆ ಮಾಡು ಇಲ್ಲವೆ. ಈ ಪಂದ್ಯಕ್ಕೆ ಮರಳಲು ಶಿಖರ್ ಧವನ್ ಜಿಮ್‌ನಲ್ಲಿ ಕಸರತ್ತು ಆರಂಭಿಸಿದ್ದಾರೆ.

 

 

ಯಶಸ್ಸಿಗೆ ಇತರ ಯಾವುದೇ ದಾರಿಗಳಲ್ಲಿ ಕಠಿಣ ಅಭ್ಯಾಸ ಒಂದೇ ದಾರಿ ಎಂದು ಶಿಖರ್ ಧವನ್ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ. ಈ ಮೂಲಕ 3ನೇ ಟೆಸ್ಟ್ ಪಂದ್ಯದಲ್ಲಿ ತಂಡ ಸೇರಿಕೊಳ್ಳಲಿದ್ದೇನೆ ಅನ್ನೋ ಸೂಚನೆ ನೀಡಿದ್ದಾರೆ.

ಆಗಸ್ಟ್ 18 ರಿಂದ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ. ಲಾರ್ಡ್ಸ್ ಪಂದ್ಯದ ಹೀನಾಯ ಪ್ರದರ್ಶನದಿಂದ ಟೀಂ ಇಂಡಿಯಾದಲ್ಲಿ ಕೆಲ ಬದಲಾವಣೆಗಳಾಗೋ ಸಾಧ್ಯತೆ ಇದೆ. ಹೀಗಾಗಿ ಧವನ್ ಕಮ್‌ಬ್ಯಾಕ್ ಕುರಿತು ಯಾವುದೇ ಸ್ಪಷ್ಟತೆ ಇಲ್ಲ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ಔಟ್, ಶುಭ್‌ಮನ್ ಗಿಲ್ ಇನ್: ಅಸಲಿ ಸತ್ಯ ಬಿಚ್ಚಿಟ್ಟ ರವಿಚಂದ್ರನ್ ಅಶ್ವಿನ್!
ಮೊದಲ ಸಲ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸಂಬಳ ಕಟ್! ಬಿಸಿಸಿಐ ಮಹತ್ವದ ತೀರ್ಮಾನ?