
ನಾಟಿಂಗ್‌ಹ್ಯಾಮ್(ಆ.19): ಟ್ರೆಂಟ್‌ಬ್ರಿಡ್ಜ್ ಟೆಸ್ಟ್ ಪಂದ್ಯದಲ್ಲಿ ಭಾರತವನ್ನ 329ರನ್‌ಗೆ ಆಲೌಟ್ ಮಾಡಿದ ಇಂಗ್ಲೆಂಡ್ ಇದೀಗ ಮೊದಲ ಇನ್ನಿಂಗ್ಸ್‌ನಲ್ಲಿ ದಿಟ್ಟ ಉತ್ತರ ನೀಡಿದೆ. ಭೋಜನ ವಿರಾಮದ ವೇಳೆಗೆ ಇಂಗ್ಲೆಂಡ್ ವಿಕೆಟ್ ನಷ್ಟವಿಲ್ಲದೆ 46 ರನ್ ಗಳಿಸಿದೆ.
ಆಲಿಸ್ಟರ್ ಕುಕ್ ಅಜೇಯ 21 ಹಾಗೂ ಕೆಟನ್ ಜೆನ್ನಿಂಗ್ಸ್ ಅಜೇಯ 20 ರನ್ ಸಿಡಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ. ಈ ಮೂಲಕ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 283 ರನ್ ಹಿನ್ನಡೆಯಲ್ಲಿದೆ.
ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 329 ರನ್‌ಗೆ ಆಲೌಟ್ ಆಯಿತು. ಆರಂಭಿಕರಾದ ಶಿಖರ್ ಧವನ್ ಹಾಗೂ ಕೆಎಲ್ ರಾಹುಲ್ 60 ರನ್‌ಗಳ ಜೊತೆಯಾಟ ನೀಡಿದ್ದರು. ಇನ್ನು ನಾಯಕ ವಿರಾಟ್ ಕೊಹ್ಲಿ 97 ರನ್ ಸಿಡಿಸಿದರೆ, ಅಜಿಂಕ್ಯ ರಹಾನೆ 81 ರನ್ ಕಾಣಿಕೆ ನೀಡಿದ್ದರು.
ಮಳೆಯಿಂದಾಗಿ ದ್ವಿತೀಯ ದಿನದಾಟ ಅಲ್ಪ ತಡವಾಗಿ ಆರಂಭಗೊಂಡಿತು. ರಿಷಬ್ ಪಂತ್ 24, ಆರ್ ಅಶ್ವಿನ 14 ರನ್ ಸಿಡಿಸಿ ಔಟಾದರು. ಮೊಹಮ್ಮದ್ ಶಮಿ ಹಾಗೂ ಜಸ್‌ಪ್ರೀತ್ ಬುಮ್ರಾ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಹೀಗಾಗಿ ಭಾರತ 329 ರನ್‌ಗೆ ಆಲೌಟ್ ಆಯಿತು. ಜೇಮ್ಸ್ ಆಂಡರ್ಸನ್, ಕ್ರಿಸ್ ವೋಕ್ಸ್ ಹಾಗೂ ಸ್ಟುವರ್ಟ್ ಬ್ರಾಡ್ ತಲಾ 3 ವಿಕೆಟ್ ಪಡೆದು ಮಿಂಚಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.