ಟ್ರೆಂಟ್‌ಬ್ರಿಡ್ಜ್ ಟೆಸ್ಟ್: 329 ರನ್‌ಗೆ ಟೀಂ ಇಂಡಿಯಾ ಆಲೌಟ್

Published : Aug 19, 2018, 04:57 PM ISTUpdated : Sep 09, 2018, 08:38 PM IST
ಟ್ರೆಂಟ್‌ಬ್ರಿಡ್ಜ್ ಟೆಸ್ಟ್: 329 ರನ್‌ಗೆ ಟೀಂ ಇಂಡಿಯಾ ಆಲೌಟ್

ಸಾರಾಂಶ

ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯ ಇದೀಗ ಸಾಕಷ್ಟು ಕುತೂಹಲ ಕೆರಳಿಸಿದೆ. ಭಾರತ ತನ್ನ ಮೊದಲ ಇನ್ನಿಂಗ್ಸ್ ಅಂತ್ಯಗೊಳಿಸಿದ್ದು, ಇದೀಗ ಇಂಗ್ಲೆಂಡ್ ಬ್ಯಾಟಿಂಗ್ ಆರಂಭಿಸಲಿದೆ. ದ್ವಿತೀಯ ದಿನದಾಟದ ಅಪ್‌ಡೇಟ್ಸ್ ಇಲ್ಲಿದೆ.

ನಾಟಿಂಗ್‌ಹ್ಯಾಮ್(ಆ.19): ಇಂಗ್ಲೆಂಡ್  ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 329 ರನ್‌ಗೆ ಆಲೌಟ್ ಆಗಿದೆ. 307 ರನ್‌ಗಳೊಂದಿಗೆ ದ್ವಿತೀಯ ದಿನದಾಟ ಮುಂದುವರಿಸಿದ ಟೀಂ ಇಂಡಿಯಾ ಇಂದು 22 ರನ್ ಸಿಡಿಸಿ 4 ವಿಕೆಟ್ ಕಳೆದುಕೊಂಡಿತು.

 

 

ಮೊದಲ ದಿನದಾಟದಲ್ಲಿ ಆರಂಭಿಕರಾದ ಶಿಖರ್ ಧವನ್ ಹಾಗೂ ಕೆಎಲ್ ರಾಹುಲ್ 60 ರನ್‌ಗಳ ಜೊತೆಯಾಟ ನೀಡಿದ್ದರು. ಇನ್ನು ನಾಯಕ ವಿರಾಟ್ ಕೊಹ್ಲಿ 97 ರನ್ ಸಿಡಿಸಿದರೆ,  ಅಜಿಂಕ್ಯ ರಹಾನೆ 81 ರನ್ ಕಾಣಿಕೆ ನೀಡಿದ್ದರು.  

ಮಳೆಯಿಂದಾಗಿ ದ್ವಿತೀಯ ದಿನದಾಟ ಅಲ್ಪ ತಡವಾಗಿ ಆರಂಭಗೊಂಡಿತು. ಚೊಚ್ಚಲ ಪಂದ್ಯ ಆಡುತ್ತಿರುವ ರಿಷಬ್ ಪಂತ್ 24 ರನ್ ಸಿಡಿಸಿ ಔಟಾದರು. ಆರ್ ಅಶ್ವಿನ್ 3 ಬೌಂಡರಿ ಮೂಲಕ 14 ರನ್ ಸಿಡಿಸಿ ಔಟಾದರು. 

ಮೊಹಮ್ಮದ್ ಶಮಿ ಹಾಗೂ ಜಸ್‌ಪ್ರೀತ್ ಬುಮ್ರಾ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಹೀಗಾಗಿ ಭಾರತ 329 ರನ್‌ಗೆ ಆಲೌಟ್ ಆಯಿತು. ಜೇಮ್ಸ್ ಆಂಡರ್ಸನ್, ಕ್ರಿಸ್ ವೋಕ್ಸ್ ಹಾಗೂ ಸ್ಟುವರ್ಟ್ ಬ್ರಾಡ್ ತಲಾ 3 ವಿಕೆಟ್ ಪಡೆದು ಮಿಂಚಿದರು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

T20 ವಿಶ್ವಕಪ್‌ನಲ್ಲಿ ಇದೇ ಮೊದಲು! ಡಬಲ್ ಸೂಪರ್ ಓವರ್‌ಗೆ ಸಾಕ್ಷಿಯಾದ ದಕ್ಷಿಣ ಆಫ್ರಿಕಾ-ಆಫ್ಘಾನಿಸ್ತಾನ ಮ್ಯಾಚ್! ಗೆದ್ದಿದ್ದು ಯಾರು?
ಟಿ20 ವಿಶ್ವಕಪ್ ಬೆನ್ನಲ್ಲೇ ಟೀಂ ಇಂಡಿಯಾ ಆಟಗಾರರಿಗೆ ಬಿಗ್ ಶಾಕ್‌ ನೀಡಿದ BCCI; ಆಟಗಾರರ ಕನಸಿಗೆ ತಣ್ಣೀರು!