3ನೇ ಟೆಸ್ಟ್ ಪಂದ್ಯದ ಗೆಲುವಿಗೆ ಭಾರತಕ್ಕಿನ್ನು 2 ಮೆಟ್ಟಿಲು

By Web DeskFirst Published Aug 21, 2018, 10:22 PM IST
Highlights

ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಟೀಂ ಇಂಡಿಯಾ ಮತ್ತೆ ಕಮ್‌ಬ್ಯಾಕ್ ಮಾಡಿದೆ ಜೋಸ್ ಬಟ್ಲರ್ ಅಬ್ಬರಕ್ಕೆ ತತ್ತರಿಸಿದ ಟೀಂ ಇಂಡಿಯಾ ಇದೀಗ ಸತತ ವಿಕೆಟ್ ಕಬಳಿಸಿ ಪಂದ್ಯದ ಮೇಲೆ ಹಿಡಿತ ಸಾಧಿಸಿದೆ.

ನಾಟಿಂಗ್‌ಹ್ಯಾಮ್(ಆ.21):ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವಿನತ್ತ ದಾಪುಗಾಲಿಟ್ಟಿದೆ. ಇಂಗ್ಲೆಂಡ್ ತಂಡದ 8 ವಿಕೆಟ್ ಕಬಳಿಸಿರುವ ಟೀಂ ಇಂಡಿಯಾ ತಿರುಗೇಟು ನೀಡಲು ಸಜ್ಜಾಗಿದೆ.

4ನೇ ದಿನದಾಟದಲ್ಲಿ  ವಿಕೆಟ್ ನಷ್ಟವಿಲ್ಲದೆ 23 ರನ್‌ಗಳೊಂದಿಗೆ ಇನ್ನಿಂಗ್ಸ್ ಮುಂದುವರಿಸಿದ ಇಂಗ್ಲೆಂಡ್ ಆರಂಭದಲ್ಲೇ ಕೆಟನ್ ಜೆನ್ನಿಂಗ್ಸ್ ವಿಕೆಟ್ ಕಳೆದುಕೊಂಡಿತು.  ಅಲಿಸ್ಟೈರ್ ಕುಕ್ 17 ರನ್ ಸಿಡಿಸಿ ಔಟಾಗಿದರು. 

ಟೀಂ ಇಂಡಿಯಾ ವೇಗಿಗಳ ದಾಳಿಗೆ ತತ್ತರಿಸಿದ ಇಂಗ್ಲೆಂಡ್, ಜೋ ರೂಟ್ ಹಾಗೂ ಒಲ್ಲಿ ಪೋಪ್ ವಿಕೆಟ್ ಕಳೆದುಕೊಂಡಿತು. ಆದರೆ ಜೋಸ್ ಬಟ್ಲರ್ ಹಾಗೂ ಬೆನ್ ಸ್ಟೋಕ್ಸ್ ಜೊತೆಯಾಟ ಭಾರತಕ್ಕೆ ಅಪಾಯದ ಸೂಚನೆ ನೀಡಿತು.

ಜೋಸ್ ಬಟ್ಲರ್ ಭರ್ಜರಿ ಶತಕ ಸಿಡಿಸಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಶತಕ ಸಿಡಿಸಿದ ಹೆಗ್ಗಳಿಕೆಗೆ ಪಾತ್ರರಾದರು.  ಇತ್ತ ಬಟ್ಲರ್‌ಗೆ ಉತ್ತಮ ಸಾಥ್ ನೀಡಿದ ಬೆನ್ ಸ್ಟೋಕ್ಸ್ ಅರ್ಧಶತಕ ಸಿಡಿಸಿ ಆಸರೆಯಾಗಿದರು. .

ಭಾರತ ಆತಂಕ ಹೆಚ್ಚಿಸಿದ ಬಟ್ಲರ್ 106 ರನ್ ಸಿಡಿಸಿ, ಜಸ್‌ಪ್ರೀತ್ ಬುಮ್ರಾಗೆ ವಿಕೆಟ್ ಒಪ್ಪಿಸಿದರು. ಜಾನಿ ಬೈರ್‌ಸ್ಟೋ ಬಂದ ಹಾಗೆ ಔಟಾದರು. ಇನ್ನು ಕ್ರಿಸ್ ವೋಕ್ಸ್ 4 ರನ್ ಸಿಡಿಸಿ ಔಟಾದರು. ಆಸರೆಯಾಗಿದ್ದ ಬೆನ್ ಸ್ಟೋಕ್ಸ್ 62 ರನ್ ಸಿಡಿಸಿ ಔಟಾದರು. ಈ ಮೂಲಕ  ಇಂಗ್ಲೆಂಡ್ 8 ವಿಕೆಟ್ ನಷ್ಟಕ್ಕೆ 241 ರನ್ ಸಿಡಿಸಿದೆ. ಈ ಮೂಲಕ ಗೆಲುವಿಗೆ 280 ರನ್ ಅವಶ್ಯಕತೆ ಇದೆ.  ಆಧರೆ ಭಾರತದ ಗೆಲುವಿಗೆ ಇನ್ನುಕೇವಲ 2 ಮೆಟ್ಟಿಲು ಮಾತ್ರ ಬಾಕಿ.

ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 329 ರನ್ ಸಿಡಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಇಂಗ್ಲೆಂಡ್ ಕೇವಲ 161 ರನ್‌ಗಳಿಗೆ ಆಲೌಟ್ ಆಗೋ ಮೂಲಕ 168 ರನ್ ಹಿನ್ನಡೆ ಅನುಭವಿಸಿತ್ತು. 2ನೇ ಇನ್ನಿಂಗ್ಸ್‌ನಲ್ಲಿ ಭಾರತ 7 ವಿಕೆಟ್ ನಷ್ಟಕ್ಕೆ 352 ರನ್ ಸಿಡಿಸಿ ಡೆಕ್ಲೇರ್ ಮಾಡಿಕೊಂಡಿತ್ತು.

click me!