ಭಾರತ-ಇಂಗ್ಲೆಂಡ್ ಟೆಸ್ಟ್: 5ನೇ ಟೆಸ್ಟ್‌ನಿಂದ ಟೀಂ ಇಂಡಿಯಾ ಸ್ಟಾರ್ ಆಟಗಾರ ಔಟ್!

Published : Sep 04, 2018, 03:25 PM ISTUpdated : Sep 09, 2018, 08:50 PM IST
ಭಾರತ-ಇಂಗ್ಲೆಂಡ್ ಟೆಸ್ಟ್: 5ನೇ ಟೆಸ್ಟ್‌ನಿಂದ ಟೀಂ ಇಂಡಿಯಾ ಸ್ಟಾರ್ ಆಟಗಾರ ಔಟ್!

ಸಾರಾಂಶ

4ನೇ ಟೆಸ್ಟ್ ಟೆಸ್ಟ್ ಪಂದ್ಯದ ಕಳಪೆ ಪ್ರದರ್ಶನ ಟೀಂ ಇಂಡಿಯಾ ಪ್ಲೇಯಿಂಗ್ 11 ಮೇಲೆ ಪರಿಣಾಮ ಬೀರಲಿದೆ. 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿರುವ ಟೀಂ ಇಂಡಿಯಾಗೆ ಇದೀಗ ಇಂಜುರಿ ಸಮಸ್ಯೆ ಕಾಡುತ್ತಿದೆ. ಪಂದ್ಯಕ್ಕೂ ಮುನ್ನವೇ ತಂಡದ ಸ್ಟಾರ್ ಆಟಗಾರ ಹೊರಬಿದ್ದಿದ್ದಾರೆ.

ಲಂಡನ್(ಸೆ.04): ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿ ಸೋತು ನಿರಾಸೆ ಅನುಭವಿಸಿರುವ ಟೀಂ ಇಂಡಿಯಾ ಇದೀಗ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದೆ. ಸೆಪ್ಟೆಂಬರ್ 7 ರಿಂದ ಆರಂಭವಾಗಲಿರುವ 5ನೇ  ಟೆಸ್ಟ್ ಪಂದ್ಯದಲ್ಲಿ ಕಮ್‌ಬ್ಯಾಕ್ ಮಾಡೋ ಮೂಲಕ ಭಾರತ ಸೋಲಿನ ಅಂತರ ಕಡಿಮೆ ಮಾಡಿಕೊಳ್ಳೋ ಲೆಕ್ಕಾಚಾರದಲ್ಲಿದೆ.

4ನೇ ಟೆಸ್ಟ್ ಪಂದ್ಯದ ಕಳಪೆ ಪ್ರದರ್ಶನದಿಂದ ಟೀಂ ಇಂಡಿಯಾದಲ್ಲಿ ಕೆಲ ಬದಲಾವಣೆಗಳಾಗೋ ಸಾಧ್ಯತೆ ಹೆಚ್ಚಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ಸ್ಟಾರ್ ಆಟಗಾರ ಆರ್ ಅಶ್ವಿನ್ ಇಂಜುರಿಗೆ ತುತ್ತಾಗಿದ್ದಾರೆ. ಹೀಗಾಗಿ 5ನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗೋ ಸಾಧ್ಯತೆ ಹೆಚ್ಚಿದೆ.

3ನೇ ಟೆಸ್ಟ್ ಪಂದ್ಯದಲ್ಲಿ ಇಂಜುರಿಗೆ ತುತ್ತಾಗಿದ್ದ ಆರ್ ಅಶ್ವಿನ್, 4ನೇ ಪಂದ್ಯಕ್ಕೆ ಲಭ್ಯರಿಲ್ಲ ಅನ್ನೋ ಮಾತು ಕೇಳಿಬಂದಿತ್ತು. ಆದರೆ ಕೊನೆ ಕ್ಷಣದಲ್ಲಿ ಆರ್ ಅಶ್ವಿನ್ ಲಭ್ಯತೆಯನ್ನ ಟೀಂ ಇಂಡಿಯಾ ಖಚಿತಪಡಿಸಿತ್ತು. ಇದೀಗ ಅಶ್ವಿನ್ ಇಂಜುರಿ ಮತ್ತೆ ಉಲ್ಬಣಿಸಿದೆ. ಹೀಗಾಗಿ ಅಂತಿಮ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ.

ಅಶ್ವಿನ್ ಸ್ಥಾನದಲ್ಲಿ ಮತ್ತೊರ್ವ ಸ್ಪಿನ್ನರ್ ರವೀಂದ್ರ ಜಡೇಜಾ ಕಣಕ್ಕಿಳಿಯುವ ಸಾಧ್ಯತೆ ಇದೆ. ಕಳೆದ 4 ಟೆಸ್ಟ್ ಪಂದ್ಯದಲ್ಲಿ ಅವಕಾಶಕ್ಕಾಗಿ ಕಾಯುತ್ತಿರುವ ಜಡೇಜಾಗೆ ಸ್ಥಾನ ನೀಡಲು ಟೀಂ ಇಂಡಿಯಾ ನಿರ್ಧರಿಸಿದೆ.

4ನೇ ಟೆಸ್ಟ್ ಪಂದ್ಯಲ್ಲಿ ಆರ್ ಅಶ್ವಿನ್ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದರು. ಇಂಗ್ಲೆಂಡ್ ಪರ  ಮೊಯಿನ್ ಆಲಿ ಅದ್ಬುತ ಪ್ರದರ್ಶನ ನೀಡಿದ್ದರು. ಆದರೆ ಅಶ್ವಿನ್ ಮಾತ್ರ ವೈಫಲ್ಯ ಅನುಭವಿಸಿದ್ದರು. ಹೀಗಾಗಿ ಅಂತಿಮ ಟೆಸ್ಟ್ ಪಂದ್ಯಕ್ಕೆ ಬದಲಾವಣೆ ಮಾಡಲು ಟೀಂ ಇಂಡಿಯಾ ನಿರ್ಧರಿಸಿತ್ತು. ಇದೀಗ ಅಶ್ವಿನ್ ಇಂಜುರಿಗೆ ತುತ್ತಾಗಿರೋದು ಜಡೇಜಾಗೆ ಅವಕಾಶ ಸಿಗಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?
ಅಂತಾರಾಷ್ಟ್ರೀಯ ಟಿ20ಯಲ್ಲಿ ಆಲ್ರೌಂಡರ್ ಆಗಿ ಅಪರೂಪದಲ್ಲೇ ಅಪರೂಪದ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!