ಭಾರತ-ಇಂಗ್ಲೆಂಡ್ ಟೆಸ್ಟ್: ಅರ್ಧಶತಕ ಸಿಡಿಸಿದ ಪೂಜಾರ-ವಿರಾಟ್ ಕೊಹ್ಲಿ

Published : Aug 20, 2018, 05:18 PM ISTUpdated : Sep 09, 2018, 09:47 PM IST
ಭಾರತ-ಇಂಗ್ಲೆಂಡ್ ಟೆಸ್ಟ್: ಅರ್ಧಶತಕ ಸಿಡಿಸಿದ ಪೂಜಾರ-ವಿರಾಟ್ ಕೊಹ್ಲಿ

ಸಾರಾಂಶ

ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಸೈನ್ಯ ಗೆಲುವಿನತ್ತ ದಾಪುಗಾಲಿಡುತ್ತಿದೆ. 3ನೇ ದಿನದಲ್ಲಿ ಅದ್ಬುತ ಬ್ಯಾಟಿಂಗ್ ಪ್ರದರ್ಶನ ಮುಂದುವರಿಸಿರುವ ಟೀಂ ಇಂಡಿಯಾ ಆಂಗ್ಲರಿಗೆ ಶಾಕ್ ನೀಡುಲ ರೆಡಿಯಾಗಿದೆ. ಇಲ್ಲಿದೆ 3ನೇ ದಿನದಾಟದ ಅಪ್‌ಡೇಟ್ಸ್

ನಾಟಿಂಗ್‌ಹ್ಯಾಮ್(ಆ.20): ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ತೃತೀಯ ದಿನವೂ ಭಾರತ ಬಿಗಿ ಹಿಡಿತ ಸಾಧಿಸಿದೆ. 2 ವಿಕೆಟ್ ನಷ್ಟಕ್ಕೆ 124 ರನ್‌ಗಳೊಂದಿಗೆ ದಿನದಾಟ ಆರಂಭಿಸಿದ ಟೀಂ ಇಂಡಿಯಾಗೆ ಚೇತೇಶ್ವರ್ ಪೂಜಾರ ಹಾಗೂ ನಾಯಕ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿ ಆಸರೆಯಾಗಿದ್ದಾರೆ.

147 ಎಸೆತ ಎದುರಿಸಿದ ಪೂಜಾರ 7  ಬೌಂಡರಿ ಮೂಲಕ ಪೂಜಾರ 50 ರನ್ ಪೂರೈಸಿದರು.  ಪೂಜಾರ ಹಾಗೂ ನಾಯಕ ವಿರಾಟ್ ಕೊಹ್ಲಿ ಜೊತೆಯಾಟದಿಂದ ಟೀಂ ಇಂಡಿಯಾ ಬೃಹತ್ ಮುನ್ನಡೆಯತ್ತ ದಾಪುಗಾಲಿಟ್ಟಿದೆ. 

ನಾಯಕ ವಿರಾಟ್ ಕೊಹ್ಲಿ ಕೂಡ ಹಾಫ್ ಸೆಂಚುರಿ ಪೂರೈಸಿದ್ದಾರೆ. 82 ಎಸೆತದಲ್ಲಿ ವಿರಾಟ್ ಕೊಹ್ಲಿ 5 ಬೌಂಡರಿ ಮೂಲಕ ಅರ್ಧಶತಕ ಸಿಡಿಸಿದರು.   ಟೀಂ ಇಂಡಿಯಾ ಸದ್ಯ 2 ವಿಕೆಟ್ ನಷ್ಟಕ್ಕೆ 185 ರನ್ ಪೂರೈಸಿದೆ. ಈ ಮೂಲಕ 353 ರನ್ ಮುನ್ನಡೆ ಪಡೆದುಕೊಂಡಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026: ಸೋಲಿನ ದವಡೆಯಿಂದ ಪಾರಾದ ಡೆಲ್ಲಿ ಕ್ಯಾಪಿಟಲ್ಸ್; ಲಖನೌಗೆ ತವರಿನಲ್ಲೇ ಮರ್ಮಾಘಾತ!
ತನ್ನಂತೆ ಇರುವವನ ಕರೆಸಿ ಸ್ನೇಹಿತನಿಗೆ ಏಪ್ರಿಲ್ ಫೂಲ್ ಮಾಡಿದ ಸಚಿನ್ ತೆಂಡೂಲ್ಕರ್