ಮೊದಲ ಪಂದ್ಯ ರದ್ದು, ಎರಡನೇಯದ್ದು ಸೋಲು.. ಸರಣಿ ಉಳಿಸಿಕೊಳ್ಳಲಿಲ್ಲ ತಂಡದಲ್ಲಿ ಹೊಸ ಬೆಳವಣಿಗೆ

Published : Jul 05, 2026, 01:44 PM IST
shreyas iyer

ಸಾರಾಂಶ

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ 0-1 ರಿಂದ ಹಿನ್ನಡೆ ಅನುಭವಿಸಿರುವ ಭಾರತಕ್ಕೆ ಮೂರನೇ ಪಂದ್ಯ ನಿರ್ಣಾಯಕವಾಗಿದೆ. ಸರಣಿ ಉಳಿಸಿಕೊಳ್ಳಲು ಗೆಲ್ಲಲೇಬೇಕಾದ ಒತ್ತಡದಲ್ಲಿರುವ ಟೀಮ್ ಇಂಡಿಯಾದಲ್ಲಿ, ಸಚಿನ್ ದಾಖಲೆ ಮುರಿದ ಯುವ ಆಟಗಾರ ವೈಭವ್ ಸೂರ್ಯವಂಶಿ ಗಮನ ಸೆಳೆದಿದ್ದಾರೆ. ಈ ಪಂದ್ಯದ ವಿವರ ಹಾಗೂ ತಂಡದ ಮುಂದಿರುವ ಸವಾಲುಗಳನ್ನು ಈ ಲೇಖನ ವಿವರಿಸುತ್ತದೆ.

ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯು ಕುತೂಹಲಕಾರಿ ಘಟ್ಟಕ್ಕೆ ತಲುಪಿದೆ. ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದರೆ, ಎರಡನೇ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡ ಭಾರತವನ್ನು ಮಣಿಸಿದೆ. ಇದರಿಂದಾಗಿ ಟೀಮ್ ಇಂಡಿಯಾ ಸರಣಿಯಲ್ಲಿ 0-1 ರಿಂದ ಹಿನ್ನಡೆ ಅನುಭವಿಸಿದೆ.

ಶ್ರೇಯಸ್ ಅಯ್ಯರ್ ನೇತೃತ್ವದ ಯುವ ಭಾರತ ತಂಡಕ್ಕೆ ಸರಣಿ ಗೆಲ್ಲುವ ಆಸೆ ಜೀವಂತವಾಗಿರಿಸಿಕೊಳ್ಳಲು ಮೂರನೇ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಒಂದು ವೇಳೆ ಈ ಪಂದ್ಯವನ್ನೂ ಸೋತರೆ ಸರಣಿ ಕೈತಪ್ಪುವ ಭೀತಿ ಎದುರಾಗಲಿದೆ. ಒಂದು ವೇಳೆ ಮೂರನೇ ಪಂದ್ಯವನ್ನೂ ಸೋತು ಟೀಂ ಇಂಡಿಯಾ ಸರಣಿ ಕೈಚೆಲ್ಲಿದರೆ ಕೋಚ್ ಗಂಭೀರ್ ಮತ್ತು ನಾಯಕ ಶ್ರೇಯಸ್ ಅಯ್ಯರ್ ಅವರ ತಂಡದ ನಿರ್ವಹಣೆ ಬಗ್ಗೆ ಚರ್ಚೆ ಆಗಲಿದೆ. ತಂಡದಲ್ಲಿ ಹೊಸ ಬೆಳವಣಿಗೆಗೂ ಕಾರಣವಾಗಬಹುದು.

 ಈಗಾಗಲೇ ಅಭಿಮಾನಿಗಳು ಟಿ-20ಯಲ್ಲಿ ಸೂರ್ಯ ಕುಮಾರ್ ಯಾದವ್ ಅವರನ್ನು ಮಿಸ್ ಮಾಡಿಕೊಳ್ತಿದ್ದೇವೆ. ಅವರನ್ನು ತಂಡಕ್ಕೆ ವಾಪಸ್ ಸೇರಿಸಿಕೊಳ್ಳಬೇಕು ಎಂಬ ಆಗ್ರಹ ಇದೆ. ಐರ್ಲೆಂಡ್ ವಿರುದ್ಧ ಸರಣಿ ಸೋಲಿನ ಕಹಿ ನೆನಪಿನಿಂದ ಅಭಿಮಾನಿಗಳು ಇನ್ನೂ ಹೊರಗೆ ಬಂದಿಲ್ಲ. ಅದರ ಮಧ್ಯೆ ನಿನ್ನೆ ಇಂಗ್ಲೆಂಡ್ ವಿರುದ್ಧದ ಎರಡನೇ ಪಂದ್ಯವನ್ನು ಕೈಚೆಲ್ಲಿದೆ. ಹೀಗಾಗಿ ಮೂರನೇ ಪಂದ್ಯದಲ್ಲಿ ಗೆಲುವು ಅನಿವಾರ್ಯ.

ಸಚಿನ್ ದಾಖಲೆ ಮುರಿದ ಸೂರ್ಯವಂಶಿ

ಈ ಸರಣಿಯ ಎರಡನೇ ಪಂದ್ಯವು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆಗೆ ಸಾಕ್ಷಿಯಾಯಿತು. ಯುವ ಆಟಗಾರ ವೈಭವ್ ಸೂರ್ಯವಂಶಿ ಶನಿವಾರ ತಮ್ಮ ಚೊಚ್ಚಲ ಪಂದ್ಯವನ್ನಾಡಿದರು. ಇದರೊಂದಿಗೆ ಭಾರತದ ಪರ ಅಂತರಾಷ್ಟ್ರೀಯ ಕ್ರಿಕೆಟ್ ಆಡಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ವೈಭವ್ ಪಾತ್ರರಾಗಿದ್ದಾರೆ. ಈ ಮೂಲಕ ಅವರು ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿಹಾಕಿದ್ದಾರೆ. ಪದಾರ್ಪಣೆಯ ಪಂದ್ಯದಲ್ಲಿ ವೈಭವ್ 14 ರನ್ ಗಳಿಸಿದರೂ, ಸರಣಿಯ ಉಳಿದ ಮೂರು ಪಂದ್ಯಗಳಲ್ಲೂ ಅವರಿಗೆ ಅವಕಾಶ ಸಿಗುವ ಸಾಧ್ಯತೆ ದಟ್ಟವಾಗಿದೆ.

ಭಾರತ vs ಇಂಗ್ಲೆಂಡ್ 3ನೇ ಟಿ20

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟಿ20 ಪಂದ್ಯವು ಜುಲೈ 7, ಮಂಗಳವಾರ ನಡೆಯಲಿದೆ. ಈ ಪಂದ್ಯವು ಲಂಕಾಶೈರ್‌ನ ವೆಸ್ಟ್ ಬ್ರಿಡ್ಜ್‌ಫೋರ್ಡ್‌ನಲ್ಲಿರುವ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ (Trent Bridge Stadium) ನಡೆಯಲಿದೆ. ಭಾರತ ಈ ಮೈದಾನದಲ್ಲಿ ಈವರೆಗೆ 4 ಟಿ20 ಪಂದ್ಯಗಳನ್ನು ಆಡಿದ್ದು, 2ರಲ್ಲಿ ಗೆಲುವು ಮತ್ತು 2ರಲ್ಲಿ ಸೋಲು ಕಂಡಿದೆ. 2022ರಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ಇಲ್ಲಿ ಭಾರತವನ್ನು 17 ರನ್‌ಗಳಿಂದ

ಸೋಲಿಸಿತ್ತು. ಭಾರತೀಯ ಕಾಲಮಾನದ ಪ್ರಕಾರ ಪಂದ್ಯವು ರಾತ್ರಿ 10:00 ಗಂಟೆಗೆ ಪ್ರಾರಂಭವಾಗಲಿದೆ. ಟಾಸ್ ಪ್ರಕ್ರಿಯೆಯು ರಾತ್ರಿ 9:30ಕ್ಕೆ ನಡೆಯಲಿದೆ. ಭಾರತದಲ್ಲಿ ಈ ಪಂದ್ಯದ ನೇರ ಪ್ರಸಾರವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ (Sony Sports Network) ಚಾನೆಲ್‌ಗಳಲ್ಲಿ ವೀಕ್ಷಿಸಬಹುದು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಯ್ಯರ್, ಗಂಭೀರ್ ಗೆ ಮತ್ತೊಂದು ಮುಖಭಂಗ! ಟೀಂ ಇಂಡಿಯಾ ಸೋಲಿಗೆ ಇಲ್ಲಿದೆ 5 ಕಾರಣಗಳು
ವೈಭವ್ ಡೆಬ್ಯೂ ದಾಖಲೆ ಬರೆದರೂ ಸಿಗಲಿಲ್ಲ ಗೆಲುವು, ಐರ್ಲೆಂಡ್ ಬಳಿಕ ಇಂಗ್ಲೆಂಡ್‌ನಲ್ಲಿ ಮಂದುವರಿದ ಸೋಲು