
ಡಬ್ಲಿನ್(ಜೂ.29): ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಶುಭಾರಂಭ ಮಾಡಿರುವ ಟೀಂ ಇಂಡಿಯಾ ಇದೀಗ 2ನೇ ಪಂದ್ಯಕ್ಕೆ ಸಜ್ಜಾಗಿದೆ. ಐರ್ಲೆಂಡ್ ರಾಜಧಾನಿ ಡಬ್ಲಿನ್‌ನಲ್ಲಿ ನಡೆಯಲಿರುವ ಅಂತಿಮ ಪಂದ್ಯಕ್ಕೂ ಮುನ್ನ ಕೊಹ್ಲಿ ಸೈನ್ಯ ಫುಲ್ ರಿಲ್ಯಾಕ್ಸ್ ಆಗಿದೆ.
ಡಬ್ಲಿನ್‌ನಲ್ಲಿರೋ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿರುವ ಟೀಂ ಇಂಡಿಯಾ ಕ್ರಿಕೆಟಿಗರು ಎಂಜಾಯ್ ಮಾಡಿದ್ದಾರೆ. ಟೀಂ ಇಂಡಿಯಾ ಕ್ರಿಕೆಟಿಗರ ಔಟಿಂಗ್ ಫೋಟೋವನ್ನ ನಾಯಕ ವಿರಾಟ್ ಕೊಹ್ಲಿ ಟ್ವಿಟರ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ.
;
ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಕೂಡ ಔಟಿಂಗ್ ಫೋಟೋಗಳನ್ನ ಪೋಸ್ಟ್ ಮಾಡಿದ್ದಾರೆ. ಈ ಮೂಲಕ 2ನೇ ಪಂದ್ಯಕ್ಕೂ ಮುನ್ನ ಕೊಹ್ಲಿ ಬಾಯ್ಸ್ ಫುಲ್ ರಿಲ್ಯಾಕ್ಸ್ ಆಗಿದ್ದಾರೆ.
ಐರ್ಲೆಂಡ್ ವಿರುದ್ಧದ ಮೊದಲ ಟಿ-ಟ್ವೆಂಟಿ ಪಂದ್ಯದಲ್ಲಿ ಭಾರತ 76 ರನ್‌ಗಳ ಗೆಲುವು ದಾಖಲಿಸಿದೆ. ಇಂದು(ಜೂ.29) ಐರ್ಲೆಂಡ್ ವಿರುದ್ಧ ದ್ವಿತೀಯ ಪಂದ್ಯ ಆಡಲಿರುವ ಭಾರತ, ಕ್ಲೀನ್ ಸ್ವೀಪ್ ಗೆಲುವಿನ ವಿಶ್ವಾಸದಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.