ಭಾರತ ಹಾಗೂ ನ್ಯೂಜಿಲೆಂಡ್ ಸರಣಿಗೆ ಕೌಂಟ್‌ಡೌನ್ ಆರಂಭವಾಗಿದೆ. ಸರಣಿಗೂ ಮುನ್ನ ಮೈಂಡ್ ಗೇಮ್ ಆರಂಭವಾಗಿದೆ. ವಿರಾಟ್ ಕೊಹ್ಲಿ ಬ್ಯಾಟಿಂಗ್ ಕುರಿತು ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಹೇಳಿದ್ದೇನು? ಇಲ್ಲಿದೆ ವಿವರ.
ನೇಪಿಯರ್(ಜ.22): ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಸರಣಿ ನಾಳೆ(ಜ.23)ರಿಂದ ಆರಂಭವಾಗಲಿದೆ. 5 ಏಕದಿನ ಹಾಗೂ 3 ಟಿ20 ಸರಣಿಗೆ ಉಭಯ ತಂಡಗಳು ಸಜ್ಜಾಗಿದೆ. ಸರಣಿ ಆರಂಭಕ್ಕೂ ಮೊದಲು ನಡೆದ ಸುದ್ದಿಗೋಷ್ಠಿಯಲ್ಲಿ ತವರಿನ ಗೆಲವುವು ಕುರಿತು ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:
ವಿರಾಟ್ ಕೊಹ್ಲಿ ಅತ್ಯುತ್ತಮ ಬ್ಯಾಟ್ಸ್‌ಮನ್. ಆದರೆ ನ್ಯೂಜಿಲೆಂಡ್ ಬೌಲರ್‌ಗಳು ಕೊಹ್ಲಿಯನ್ನ ಕಟ್ಟಿಹಾಕಲು ಎಲ್ಲಾ ಪ್ರಯತ್ನ ಮಾಡಲಿದ್ದಾರೆ ಎಂದು ವಿಲಿಯಮ್ಸನ್ ಹೇಳಿದ್ದಾರೆ. ಕೊಹ್ಲಿ ಎಲ್ಲಾ ಮಾದರಿಯಲ್ಲೂ ಯಶಸ್ಸು ಸಾಧಿಸಿದ್ದಾರೆ. ಹೀಗಾಗಿ ಕೊಹ್ಲಿ ಸವಾಲು ಎದುರಿಸಲು ನ್ಯೂಜಿಲೆಂಡ್ ಹೆಚ್ಚಿನ ಶ್ರಮ ವಹಿಸಬೇಕಿದೆ ಎಂದಿದ್ದಾರೆ.
ಇದನ್ನೂ ಓದಿ: ಆಸಿಸ್ ವಿರುದ್ಧದ ಗೆಲುವು- ಆಯ್ಕೆ ಸಮಿತಿಗೆ ಬಿಸಿಸಿಐ ಭರ್ಜರಿ ಗಿಫ್ಟ್!
ಕೊಹ್ಲಿ ಜೊತೆಗೆ ಟೀಂ ಇಂಡಿಯಾ ಇತರ ಬ್ಯಾಟ್ಸ್‌ಮನ್‌ಗಳನ್ನೂ ಕಟ್ಟಿಹಾಕಲು ರಣತಂತ್ರ ರೂಪಿಸಲಿದ್ದೇವೆ ಎಂದಿದ್ದಾರೆ. ಜನವರಿ 23 ರಿಂದ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ ಆರಂಭವಾಗಲಿದೆ. ಬಳಿಕ 3 ಟಿ20 ಪಂದ್ಯ ನಡೆಯಲಿದೆ.