ಕ್ರುನಾಲ್ ಪಾಂಡ್ಯ ಮ್ಯಾಜಿಕ್- ಸಂಕಷ್ಟದಲ್ಲಿ ನ್ಯೂಜಿಲೆಂಡ್!

Published : Feb 08, 2019, 12:29 PM IST
ಕ್ರುನಾಲ್ ಪಾಂಡ್ಯ ಮ್ಯಾಜಿಕ್- ಸಂಕಷ್ಟದಲ್ಲಿ ನ್ಯೂಜಿಲೆಂಡ್!

ಸಾರಾಂಶ

2ನೇ ಟಿ20 ಪಂದ್ಯದಲ್ಲಿ ಭಾರತದ ಸ್ಪಿನ್ ಮೋಡಿಗೆ ನ್ಯೂಜಿಲೆಂಡ್ ತತ್ತರಿಸಿದೆ.  ಆಕ್ಲೆಂಡ್‌ನಲ್ಲಿ ನಡೆಯುತ್ತಿರುವ 2ನೇ ಪಂದ್ಯದಲ್ಲಿ ಆತಿಥೇಯ ಕಿವೀಸ್ ಇದೀಗ ವಿಕೆಟ್ ಉಳಿಸಿಕೊಳ್ಳಲು ಪರದಾಡುತ್ತಿದೆ. ಇಲ್ಲಿದೆ ಪಂದ್ಯದ ಅಪ್‌ಡೇಟ್ಸ್.  

ಆಕ್ಲೆಂಡ್(ಫೆ.08): ನ್ಯೂಜಿಲೆಂಡ್ ವಿರುದ್ದದ 2ನೇ ಟಿ20 ಪಂದ್ಯದಲ್ಲಿ ಆತಿಥೇಯ ನ್ಯೂಜಿಲೆಂಡ್ ಸಂಕಷ್ಟಕ್ಕೆ ಸಿಲುಕಿದೆ.  ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ನ್ಯೂಜಿಲೆಂಡ್ ತಂಡಕ್ಕೆ ಕ್ರುನಾಲ್ ಪಾಂಡ್ಯ ಶಾಕ್ ನೀಡಿದ್ದಾರೆ. ಹೀಗಾಗಿ ಕಿವೀಸ್ ಅಲ್ಪಮೊತ್ತಕ್ಕೆ ಕುಸಿಯುವ ಭೀತಿಯಲ್ಲಿದೆ.

ಇದನ್ನೂ ಓದಿ: ಮಾಜಿ ನಾಯಕ ಸೌರವ್ ಗಂಗೂಲಿ ಮನೆಗೆ ಹೊಸ ಅತಿಥಿ ಆಗಮನ!!

ಮೊದಲ ಪಂದ್ಯದಲ್ಲಿ ಅಬ್ಬರಿಸಿದ ಟಿಮ್ ಸೈಫರ್ಟ್ 2ನೇ ಪಂದ್ಯದಲ್ಲಿ ನಿರಾಸೆ ಮೂಡಿಸಿದರು. ಭುವನೇಶ್ವರ್ ಕುಮಾರ್ ಎಸೆತದಲ್ಲಿ ವಿಕೆಟ್ ಕೀಪರ್ ಎಂ.ಎಸ್.ಧೋನಿಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು. ಮೊದಲ ವಿಕೆಟ್ ಪತನದ ಬಳಿಕ ಕ್ರುನಾಲ್ ಪಾಂಡ್ಯ ಮೋಡಿ ಮಾಡಿದರು.

ಇದನ್ನೂ ಓದಿ: ಸ್ಪಿನ್ನರ್‌ ಚಹಲ್‌ ಕಾಲೆಳೆದ ಮಹಿಳಾ ಕ್ರಿಕೆಟರ್‌ ಸ್ಮೃತಿ

ಕಾಲಿನ್ ಮುನ್ರೊ, ನಾಯಕ ಕೇನ್ ವಿಲಿಯಮ್ಸನ್ ಹಾಗೂ ಡರ್ಲಿ ಮಿಚೆಲ್, ಕ್ರುನಾಲ್‌ಗೆ ವಿಕೆಟ್ ಒಪ್ಪಿಸಿದರು. 50 ರನ್‌ಗೆ 4 ವಿಕೆಟ್ ಕಳೆದುಕೊಂಡ ಕಿವೀಸ್ ಸಂಕಷ್ಟಕ್ಕೆ ಸಿಲುಕಿದೆ. ಸದ್ಯ ಕಿವೀಸ್ ತಂಡಕ್ಕೆ ರಾಸ್ ಟೇಲರ್ ಹಾಗೂ ಕೊಲಿನ್ ಡೇ ಗ್ರ್ಯಾಂಡ್ ಹೊಮ್ಮೆ ಆಸರೆಯಾಗಿದ್ದಾರೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?