ಇಂಡೋ-ಪಾಕ್ ವಿಶ್ವಕಪ್ ಪಂದ್ಯ- ಕೇಂದ್ರ ಸರ್ಕಾರದ ನಿರ್ಧಾರ ಅಂತಿಮ!

Published : Feb 20, 2019, 03:00 PM IST
ಇಂಡೋ-ಪಾಕ್ ವಿಶ್ವಕಪ್ ಪಂದ್ಯ- ಕೇಂದ್ರ ಸರ್ಕಾರದ ನಿರ್ಧಾರ ಅಂತಿಮ!

ಸಾರಾಂಶ

ಭಾರತ ಹಾಗೂ ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯಕ್ಕೆ ಐಸಿಸಿ ಗ್ರೀನ್ ಸಿಗ್ನಲ್ ನೀಡದ ಬೆನ್ನಲ್ಲೇ, ಇದೀಗ ಬಿಸಿಸಿಐ ಈ ಕುರಿತು ಮಾತನಾಡಿದೆ. ಪಾಕ್ ವಿರುದ್ಧದ ಪಂದ್ಯ ಆಡೋ ಕುರಿತು ಕೇಂದ್ರ ಸರ್ಕಾರದ ನಿರ್ಧಾರ ಅಂತಿ ಎಂದಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

ಮುಂಬೈ(ಫೆ.20): ಪುಲ್ವಾಮ ದಾಳಿಯಿಂದ ಪಾಕಿಸ್ತಾನ ವಿರುದ್ಧದ ಬಹುತೇಕ ವ್ಯವಹಾರಗಳು ಬಂದ್ ಆಗಿದೆ. ಪಾಕ್ ಜೊತೆಗಿನ ಯಾವುದೇ ಸಂಬಂಧಕ್ಕೂ ಭಾರತ ತಯಾರಿಲ್ಲ. ಇದರ ನಡುವೆ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ದದ ಪಂದ್ಯ ಬಹಿಷ್ಕರಿಸುವಂತೆ ಒತ್ತಾಯ ಕೇಳಿಬಂದಿದೆ. ಈ ಕುರಿತು ಬಿಸಿಸಿಐ ಅಧಿಕಾರಿಗಳು ಮೌನ ಮುರಿದಿದ್ದಾರೆ.

ಇದನ್ನೂ ಓದಿ: ಪುಲ್ವಾಮಾ ದಾಳಿ: ಭಾರತ-ಪಾಕ್ ವಿಶ್ವಕಪ್ ಪಂದ್ಯ - ನಿರ್ಧಾರ ಪ್ರಕಟಿಸಿದ ICC

2019ರ ವಿಶ್ವಕಪ್ ಟೂರ್ನಿ ವೇಳಾಪಟ್ಟಿ ಪ್ರಕಾರ ಜೂನ್ 16 ರಂದು ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಲಿದೆ. ಇತ್ತ ಐಸಿಸಿ ಕೂಡ ವೇಳಾಪಟ್ಟಿ ಪ್ರಕಾರ ಇಂಡೋ-ಪಾಕ್ ಪಂದ್ಯ ನಡೆಯಲಿದೆ ಎಂದು ಐಸಿಸಿ ಸ್ಪಷ್ಟಪಡಿಸಿದೆ. ಆದರೆ ಪಾಕಿಸ್ತಾನ ವಿರುದ್ಧದ  ವಿಶ್ವಕಪ್ ಪಂದ್ಯ ಆಡೋ ಕುರಿತು  ಕೇಂದ್ರ ಸರ್ಕಾರ ನಿರ್ಧಾರವೇ ಅಂತಿಮ ಎಂದು ಬಿಸಿಸಿಐ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಪುಲ್ವಾಮಾ ದಾಳಿ: ಕಂಗಾಲಾದ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಿಂದ ಹತಾಶೆ ಮಾತು!

ಪಾಕಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯ  ಬಹಿಷ್ಕರಿಸಿದರೆ ಪಾಕ್ ತಂಡಕ್ಕೆ 2 ಅಂಕಗಳು ಲಭ್ಯವಾಗಲಿದೆ. ಇನ್ನು ಫೈನಲ್ ಪಂದ್ಯದಲ್ಲಿ ಮತ್ತೆ ಭಾರತ ಹಾಗೂ ಪಾಕಿಸ್ತಾನ  ಮುಖಾಮುಖಿಯಾದರೆ ಪಾಕ್ ಪಂದ್ಯ ಆಡದೇ ವಿಶ್ವಕಪ್ ಗೆಲ್ಲಲಿದೆ. ಹೀಗಾಗಿ ಬಹಿಷ್ಕರಿಸುವುದು ಸೂಕ್ತವಲ್ಲ. ಆದರೆ ಇಂಡೋ-ಪಾಕ್ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ವಿರುದ್ಧವಾಗಿ ಬಿಸಿಸಿಐ ನಡೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಫೆ.27 ರಂದು ಐಸಿಸಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಇಂಡೋ-ಪಾಕ್ ವಿಶ್ವಕಪ್ ಪಂದ್ಯ ಪ್ರಸ್ತಾಪವಾಗಲಿದೆ ಎಂದಿದ್ದಾರೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ರೈಸ್ಟ್‌ಚರ್ಚ್ ಪವಾಡ: ಕಿವೀಸ್ ಎದುರು ಐತಿಹಾಸಿಕ ಡ್ರಾ ಸಾಧಿಸಿದ ವೆಸ್ಟ್ ಇಂಡೀಸ್!
20 ಮ್ಯಾಚ್ ಬಳಿಕ ಕೊನೆಗೂ ಟಾಸ್ ಗೆದ್ದ ಭಾರತ! ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!