
ಧರ್ಮಶಾಲ(ಸೆ.15): ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯಕ್ಕಾಗಿ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆಯಾಗಿದೆ. ನಿರಂತರ ಮಳೆಯಿಂದಾಗಿ ಮಹತ್ವದ ಪಂದ್ಯ ರದ್ದುಗೊಂಡಿದೆ. ಧರ್ಮಶಾಲದಲ್ಲಿ ಕಳೆದ ನಾಲ್ಕು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿದೆ. ಸೆ.15 ರಂದು ಕೂಡ ಸತತ ಮಳೆ ಪಂದ್ಯಕ್ಕೆ ಅನುವು ಮಾಡಿಕೊಡಲಿಲ್ಲ. ಹೀಗಾಗಿ ಮ್ಯಾಚ್ ರೆಫ್ರಿ ಪಂದ್ಯವನ್ನು ರದ್ದು ಮಾಡಿದರು.
ಇದನ್ನೂ ಓದಿ: ಭಾರತ-ಸೌತ್ ಆಫ್ರಿಕಾ ಸರಣಿ; ಯಾರು ಮರೆತಿಲ್ಲ 4 ಅತಿ ದೊಡ್ಡ ವಿವಾದ!
ಕಳೆದ ನಾಲ್ಕು ದಿನಗಳಿಂದ ಧರ್ಮಶಾಲದಲ್ಲಿ ಸತತ ಮಳೆಯಾಗುತ್ತಿದೆ. ಹೀಗಾಗಿ ಮೈದಾನ ಸಂಪೂರ್ಣ ಒದ್ದೆಯಾಗಿತ್ತು. ಆದರೆ ಸಿಬ್ಬಂದಿಗಳ ಸತತ ಪ್ರಯತ್ನದಿಂದ ಮೈದಾನ ಸಜ್ಜುಗೊಳಿಸಲಾಗಿತ್ತು. ಪಂದ್ಯ ಆರಂಭಕ್ಕೂ ಮುನ್ನ ಮತ್ತೆ ಸುರಿಯಲು ಆರಂಭಿಸಿದ ಮಳೆ ಬಿಡುವು ನೀಡಲಿಲ್ಲ. ಹೀಗಾಗಿ ಪಂದ್ಯ ರದ್ದಾಗಿದೆ.
ಇದನ್ನೂ ಓದಿ: ಭಾರತ-ಸೌತ್ಆಫ್ರಿಕಾ ಸರಣಿ; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ!
ಸೌತ್ ಆಫ್ರಿಕಾ ವಿರುದ್ಧದ 3 ಟಿ20 ಪಂದ್ಯದಲ್ಲಿ ಮೊದಲ ಪಂದ್ಯ ಮಳೆಗೆ ಆಹುತಿಯಾಗಿದೆ. ಸೆಪ್ಟೆಂಬರ್ 18 ರಂದು ಮೊಹಾಲಿಯಲ್ಲಿ 2ನೇ ಟಿ20 ಪಂದ್ಯ ನಡೆಯಲಿದೆ. ಇನ್ನು ಸೆಪ್ಟೆಂಬರ್ 22 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಲ್ಲಿ 3ನೇ ಟಿ20 ಪಂದ್ಯ ನಡೆಯಲಿದೆ. ಚುಟುಕು ಸರಣಿ ಬಳಿಕ ಅಕ್ಟೋಬರ್ 2 ರಿಂದ 3 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.