
ಬೆಂಗಳೂರು(ಸೆ.17): ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಮೊದಲ ಟಿ20 ಸರಣಿ ಮಳೆಯಿಂದ ರದ್ದಾಗಿದೆ. ಇದೀಗ 2 ಮತ್ತು 3ನೇ ಟಿ20 ಪಂದ್ಯತ್ತ ಅಭಿಮಾನಿಗಳ ಚಿತ್ತ ನೆಟ್ಟಿದೆ. ಐಪಿಎಲ್ ಟೂರ್ನಿ ಬಳಿಕ ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಸೆ. 22 (ಭಾನುವಾರ) ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ, ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಹಾಗೂ ಕೊನೆಯ ಟಿ20 ಪಂದ್ಯದ ಟಿಕೆಟ್‌ಗೆ ಭಾರೀ ಬೇಡಿಕೆ ಶುರುವಾಗಿದೆ.
ಇದನ್ನೂ ಓದಿ: ಭಾರತ-ಸೌತ್ಆಫ್ರಿಕಾ ಸರಣಿ; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ!
ಸೋಮವಾರ ಇಲ್ಲಿನ ಬಾಕ್ಸ್ ಆಫೀಸ್‌ನಲ್ಲಿ ಟಿಕೆಟ್ ಮಾರಾಟ ನಡೆಯಿತು. ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ಮಾರಾಟದ ಮೊದಲ ದಿನವೇ ಟಿಕೆಟ್‌ಗಳು ಸೋಲ್ಡ್ ಔಟ್ ಆದವು ಎಂದು ಮೂಲಗಳು ತಿಳಿಸಿವೆ. ಯಾವುದೇ ಅಹಿತಕರ ಘಟನೆ ನಡೆಯದಿರಲಿ ಎಂದು ಮುಂಜಾಗ್ರತ ಕ್ರಮವಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಪೊಲೀಸರ ಸಹಾಯ ಪಡೆದುಕೊಂಡಿತ್ತು. ಮೊದಲ ಪಂದ್ಯ ಮಳೆಗೆ ಬಲಿಯಾಗಿದ್ದು, ಬುಧವಾರ ಮೊಹಾಲಿಯಲ್ಲಿ 2ನೇ ಟಿ20 ನಡೆಯಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.