ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಯಾರಿಗೆಲ್ಲಾ ಸ್ಥಾನ ಸಿಗಲಿಗದೆ? ಕನ್ನಡಿಗರಾದ ಕೆಎಲ್ ರಾಹುಲ್ ಹಾಗೂ ಮನೀಶ್ ಪಾಂಡೆ ಚುಟುಕು ಸರಣಿಯಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಾರಾ? ಸುವರ್ಣನ್ಯೂಸ್.ಕಾಂ ಸಂಭವನೀಯ ತಂಡ ಆಯ್ಕೆ ಮಾಡಿದೆ. ಈ ತಂಡದಲ್ಲಿ ಸ್ಥಾನ ಪಡೆದ ಕ್ರಿಕೆಟಿಗರ ಪಟ್ಟಿ ಇಲ್ಲಿದೆ.
ಧರ್ಮಶಾಲಾ(ಸೆ.15): ವೆಸ್ಟ್ ಇಂಡೀಸ್ ಸರಣಿಯಲ್ಲಿ ಭರ್ಜರಿ ಗೆಲುವಿನ ಬಳಿಕ ಇದೀಗ ಟೀಂ ಇಂಡಿಯಾ ಮತ್ತೊಂದು ಮಹತ್ವದ ಸರಣಿಗೆ ರೆಡಿಯಾಗಿದೆ. ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿ ಇಂದಿನಿಂದ(ಸೆ.15) ಆರಂಭಗೊಳ್ಳುತ್ತಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಮೊದಲ ಟಿ20 ಪಂದ್ಯಕ್ಕೆ ಉಭಯ ತಂಡಗಳು ಭರ್ಜರಿ ತಯಾರಿ ನಡೆಸಿದೆ. ಪಂದ್ಯಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಇದರ ಜೊತೆಗೆ ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆಯಿಲಿದ್ದಾರೆ ಅನ್ನೋ ಕುತೂಹಲ ಕೂಡ ಹೆಚ್ಚಾಗಿದೆ.
ಇದನ್ನೂ ಓದಿ: ಇಂದು ಇಂಡೋ-ಆಫ್ರಿಕಾ ಮೊದಲ ಟಿ20 ಕದನ
ಭಾರತ ಸಂಭನೀಯ ತಂಡ:
ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ(ನಾಯಕ), ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕ್ರುನಾಲ್ ಪಾಂಡ್ಯ, ವಾಶಿಂಗ್ಟನ್ ಸುಂದರ್, ದೀಪಕ್ ಚಹಾರ್ ಹಾಗೂ ನವದೀಪ್ ಸೈನಿ
ಇದನ್ನೂ ಓದಿ: ಭಾರತ-ಸೌತ್ ಆಫ್ರಿಕಾ ಸರಣಿ; ಯಾರು ಮರೆತಿಲ್ಲ 4 ಅತಿ ದೊಡ್ಡ ವಿವಾದ!
ಸಂಭನೀಯ ತಂಡದಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಕಣಕ್ಕಿಳಿಯಲಿದ್ದಾರೆ. ಕನ್ನಡಿಗ ಹೀಗಾಗಿ ಕೆಎಲ್ ರಾಹುಲ್‌ಗೆ ಅವಕಾಶ ಸಿಗುವ ಸಾಧ್ಯತೆ ಕಡಿಮೆ. ಮತ್ತೊರ್ವ ಕನ್ನಡಿಗ ಮನೀಶ್ ಪಾಂಡೆಗೆ ಸ್ಥಾನ ಸಿಗಲಿದೆಯೇ ಅನ್ನೋ ಕುತೂಹಲ ಕಾಡುತ್ತಿದೆ.
ಬೌಲಿಂಗ್ ವಿಭಾಗದಲ್ಲಿ ನವದೀಪ್ ಸೈನಿ, ಹಾಗೂ ದೀಪರ್ ಚಹಾರ್ ವೇಗದ ಸಾರಥ್ಯ ವಹಿಸಿಕೊಳ್ಳಲಿದ್ದಾರೆ. ಆಲ್ರೌಂಡರ್ ಕೋಟಾದಡಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಅವಕಾಶ ಗಿಟ್ಟಿಸಿಕೊಳ್ಳಲಿದ್ದಾರೆ.