ಇಂಡೋ-ಆಫ್ರಿಕಾ ಟಿ20: ಬೆಂಗಳೂರು ಪಂದ್ಯದ ಟಿಕೆಟ್ ಕೇವಲ ₹500 ಮಾತ್ರ..!

Published : Sep 08, 2019, 05:13 PM ISTUpdated : Sep 08, 2019, 05:45 PM IST
ಇಂಡೋ-ಆಫ್ರಿಕಾ ಟಿ20: ಬೆಂಗಳೂರು ಪಂದ್ಯದ ಟಿಕೆಟ್ ಕೇವಲ ₹500 ಮಾತ್ರ..!

ಸಾರಾಂಶ

ಐಪಿಎಲ್ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಕ್ರಿಕೆಟ್ ನೋಡಲು ಅಭಿಮಾನಿಗಳು ಕಾಯುತ್ತಿದ್ದರು. ಇದೀಗ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಪಂದ್ಯಕ್ಕೆ ಬೆಂಗಳೂರು ಆತಿಥ್ಯ ವಹಿಸಲಿದೆ. ಕ್ರಿಕೆಟ್ ಪಂದ್ಯದ ಆರಂಭಿಕ ಬೆಲೆ 500 ರುಪಾಯಿ ನಿಗದಿ ಪಡಿಸಲಾಗಿದೆ. ಪಂದ್ಯ ಯಾವಾಗ..? ಟಿಕೆಟ್ ಎಲ್ಲಿ ಸಿಗುತ್ತೆ..? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ನೋಡಿ ಉತ್ತರ...

ಬೆಂಗಳೂರು(ಸೆ.08): ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಹಾಗೂ ಅಂತಿಮ ಟಿ20 ಪಂದ್ಯಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನ ಆತಿಥ್ಯ ವಹಿಸಲಿದೆ. ಸೆ. 22ರಂದು ನಡೆಯಲಿರುವ ಪಂದ್ಯದ ಟಿಕೆಟ್’ಗಳು ಕೌಂಟರ್’ನಲ್ಲಿ ಸೆಪ್ಟೆಂಬರ್ 16ರಿಂದ ನೀಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ತಿಳಿಸಿದೆ.

ಭಾರ​ತಕ್ಕೆ ಬಂದಿ​ಳಿದ ದಕ್ಷಿಣ ಆಫ್ರಿಕಾ ತಂಡ

ಹೌದು, ಕೊನೆಯ ಟಿ20 ಪಂದ್ಯದ ಟಿಕೆಟನ್ನು ಸೆ.16 ರಂದು ಬೆಳಗ್ಗೆ 10 ಗಂಟೆಗೆ ಕೌಂಟರ್‌ನಲ್ಲಿ ಮಾರಾಟ ಮಾಡಲಾಗುತ್ತದೆ. 5000 ರುಪಾಯಿಗಳಿಗಿಂತ ಹೆಚ್ಚಿನ ಬೆಲೆಯ ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಕೊಂಡುಕೊಳ್ಳಬೇಕು. https://www.ksca.cricket ಮೂಲಕ ಟಿಕೆಟ್‌ ಪಡೆ​ಯ​ಬ​ಹು​ದಾ​ಗಿದೆ. ಕನಿಷ್ಠ 500 ರುಪಾಯಿಂದ ಗರಿಷ್ಠ 10,000 ಬೆಲೆಯ ಟಿಕೆಟ್‌ಗಳು ದೊರೆಯಲಿವೆ. 

ಮತ್ತೆ ಟೀಂ ಇಂಡಿಯಾ ಕಾಲೆಳೆದ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್..!

ಜಿ ಅಪ್ಪರ್‌, ಲೋವರ್‌ 1 ಹಾಗೂ 2 ಸ್ಟ್ಯಾಂಡ್‌ನ 500 ರುಪಾಯಿ ಬೆಲೆಯ ಟಿಕೆಟ್‌ಗಳನ್ನು ಕ್ರೀಡಾಂಗಣದ ಗೇಟ್‌ ನಂ.2 ರಲ್ಲಿ ಮಾರಾಟ ಮಾಡಲಾಗುವುದು ಎಂದು ಕೆಎಸ್‌ಸಿಎ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿಯಲ್ಲಿ ಮತ್ತೆ ಐಪಿಎಲ್ : ಇಂದು ನಿರ್ಧಾರ
ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ