
ಚೆನ್ನೈ(ನ.11): ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ 3ನೇ ಟಿ20 ಪಂದ್ಯ ಆರಂಭದಲ್ಲೇ ಕುತೂಹಲ ಮೂಡಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ವಿಂಡೀಸ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿತು. 8ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ವೆಸ್ಟ್ ಇಂಡೀಸ್ ಇದೀಗ ಮೊದಲ ವಿಕೆಟ್ ಕಳೆದುಕೊಂಡಿದೆ.
ಶೈ ಹೋಪ್ ಹಾಗೂ ಶಿಮ್ರೊನ್ ಹೆಟ್ಮೆಯರ್ ಮೊದಲ ಎಸೆತದಿಂದಲೇ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕೇವಲ 6 ಓವರ್‌ಗಳಲ್ಲಿ ಈ ಜೋಡಿ 51 ರನ್ ಜೊತೆಯಾಟ ನೀಡೋ ಮೂಲಕ ಬೃಹತ್ ಮೊತ್ತದ ಸೂಚನೆ ನೀಡಿದರು. ಆದರೆ 24 ರನ್ ಸಿಡಿಸಿ ಮುನ್ನಗ್ಗುತ್ತಿದ್ದ ಶೈ ಹೋಪ್ ಯುಜವೇಂದ್ರ ಚೆಹಾಲ್‌ಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ ವಿಂಡೀಸ್ ಮೊದಲ ವಿಕೆಟ್ ಕಳೆದುಕೊಂಡಿತು.
ಅಂತಿಮ ಟಿ20 ಪಂದ್ಯಕ್ಕಾಗಿ ಟೀಂ ಇಂಡಿಯಾ 2 ಬದಲಾವಣೆ ಮಾಡಿದೆ. ವೇಗಿ ಜಸ್‌ಪ್ರೀತ್ ಬುಮ್ರಾ ಹಾಗೂ ಸ್ಪಿನ್ನರ್ ಕುಲ್ದೀಪ್ ಯಾದವ್ ಬದಲಿಗೆ ಯಜುವೇಂದ್ರ ಚಹಾಲ್ ಹಾಗೂ ವಾಶಿಂಗ್ಟನ್ ಸುಂದರ್ ಸ್ಥಾನ ಪಡೆದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.