ಇಂಡೋ-ವಿಂಡೀಸ್ ಟಿ20: ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ!

Published : Nov 04, 2018, 06:38 PM IST
ಇಂಡೋ-ವಿಂಡೀಸ್ ಟಿ20: ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ!

ಸಾರಾಂಶ

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿ ಆರಂಭಗೊಂಡಿದೆ. ಈಗಾಗಲೆ ಟಾಸ್ ಗೆದ್ದಿರುವ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಹಾಗಾದರೆ ತಂಡದಲ್ಲಿ ಸ್ಥಾನ ಪಡೆದವರು ಯಾರು? ಇಲ್ಲಿದೆ ವಿವರ.

ಕೋಲ್ಕತ್ತಾ(ನ.04): ವೆಸ್ಟ್ ಇಂಡೀಸ್ ವಿರುದ್ದದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ತಂಡವನ್ನ ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ಇದೀಗ ಗೆಲುವಿನ ವಿಶ್ವಾಸದಲ್ಲಿದ್ದಾರೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡಕ್ಕೆ ಇಬ್ಬರು ಯುವ ಕ್ರಿಕೆಟಿಗರ ಪಾದಾರ್ಪಣೆ ಮಾಡಿದ್ದಾರೆ. ಯುವ ವೇಗಿ ಖಲೀಲ್ ಅಹಮ್ಮದ್ ಹಾಗೂ ಹಾರ್ದಿಕ್ ಪಾಂಡ್ಯ ಸಹೋದರ ಕ್ರುನಾಲ್ ಪಾಂಡ್ಯ ಟಿ20 ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. 

 

 

ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿಯಲ್ಲಿ ಬೆಂಚ್ ಕಾದಿದ್ದ ಕನ್ನಡಿಗ ಕೆಎಲ್ ರಾಹುಲ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇನ್ನು ಮತ್ತೊರ್ವ ಕನ್ನಡಿಗ ಮನೀಶ್ ಪಾಂಡೆ ಕೂಡ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.  ನಾಯಕ ವಿರಾಟ್ ಕೊಹ್ಲಿ ಚುಟುಕು ಸರಣಿಯಿಂದ ವಿಶ್ರಾಂತಿ ಪಡೆದಿದ್ದರೆ, ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿಯನ್ನ ಡ್ರಾಪ್ ಮಾಡಲಾಗಿದೆ. 

ಟೀಂ ಇಂಡಿಯಾ:
ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ರಿಷಬ್ ಪಂತ್, ಮನೀಶ್ ಪಾಂಡೆ, ದಿನೇಶ್ ಕಾರ್ತಿಕ್, ಕ್ರುನಾಲ್ ಪಾಂಡ್ಯ, ಕುಲ್ದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಖಲೀಲ್ ಅಹಮ್ಮದ್ ಉಮೇಶ್ ಯಾದವ್.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಿನಿ ಹರಾಜಿನ ಬೆನ್ನಲ್ಲೇ KKR ತಂಡಕ್ಕೆ ಬಿಗ್ ಶಾಕ್! ₹9.2 ಕೋಟಿ ನೀಡಿ ಖರೀದಿಸಿದ ಈ ಸ್ಟಾರ್ ಕ್ರಿಕೆಟಿಗ ಐಪಿಎಲ್ ಆಡೋದೇ ಡೌಟ್!
ಟಿ20 ರ್‍ಯಾಂಕಿಂಗ್‌ನಲ್ಲಿ ಬುಮ್ರಾ ದಾಖಲೆ ಧೂಳೀಪಟ; ವರುಣ್ ಚಕ್ರವರ್ತಿ ಹೊಸ ದಾಖಲೆ