ಟಿ20ಯಲ್ಲಿ 4ನೇ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್

By Web DeskFirst Published Nov 6, 2018, 8:40 PM IST
Highlights

ವೆಸ್ಟ್ ಇಂಡೀಸ್ ವಿರುದ್ದದ 2ನೇ ಟಿ20 ಪಂದ್ಯದಲ್ಲಿ ರೋಹಿತ್  ಶರ್ಮಾ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ರೋಹಿತ್ ಶರ್ಮಾ ಇನ್ನಿಂಗ್ಸ್ ಹೇಗಿತ್ತು? ರೋಹಿತ್ ಬರದೆ ದಾಖಲೆ ಏನು? ಇಲ್ಲಿದೆ. 
 

ಲಖನೌ(ನ.06): ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಚುಟುಕು ಕ್ರಿಕೆಟ್‌ನಲ್ಲಿ ರೋಹಿತ್ 4ನೇ ಸೆಂಚುರಿ ಪೂರೈಸಿದರು. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ಸೆಂಚುರಿ ಸಿಡಿಸಿದ ಕ್ರಿಕೆಟಿಗ ಅನ್ನೋ ಹೆಗ್ಗಳಿಕೆಗೆ  ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ.

ಟಾಸ್ ಸೋತು ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡುತ್ತಿದೆ. ಆರಂಭಿಕ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಮೊದಲ ವಿಕೆಟ್‌ಗೆ 123 ರನ್ ಜೊತೆಯಾಟ ನೀಡಿದರು. ಧವನ್ 43 ರನ್ ಸಿಡಿಸಿ ಔಟಾದರೆ, ರೋಹಿತ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು.

59 ಎಸೆತದಲ್ಲಿ ರೋಹಿತ್ ಶರ್ಮಾ ಸೆಂಚುರಿ ದಾಖಲಿಸಿದರು. ರೋಹಿತ್ ಒಟ್ಟು 61 ಎಸೆತದಲ್ಲಿ 8 ಬೌಂಡರ್ ಹಾಗೂ 7 ಸಿಕ್ಸರ್ ನೆರವಿನಿಂದ ಅಜೇಯ 111 ರನ್ ಸಿಡಿಸಿದರು. ರೋಹಿತ್ ಶರ್ಮಾ ಅಬ್ಬರಿಂದ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 195 ರನ್ ಸಿಡಿಸಿದೆ.

click me!