ಇಂಡೋ-ವಿಂಡೀಸ್ 2ನೇ ಟಿ20: ಭಾರತ ತಂಡದಲ್ಲಿ ಒಂದು ಬದಲಾವಣೆ?

Published : Nov 06, 2018, 04:55 PM IST
ಇಂಡೋ-ವಿಂಡೀಸ್ 2ನೇ ಟಿ20: ಭಾರತ ತಂಡದಲ್ಲಿ ಒಂದು ಬದಲಾವಣೆ?

ಸಾರಾಂಶ

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ 2ನೇ ಟಿ20 ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ವಿಂಡೀಸ್ ಕಮ್‌ಬ್ಯಾಕ್ ವಿಶ್ವಾಸದಲ್ಲಿದ್ದರೆ, ಟೀಂ ಇಂಡಿಯಾ ಸರಣಿ ಗೆಲುವಿಗೆ ಹೊಂಚು ಹಾಕಿದೆ. 2ನೇ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿನ ಬದಲಾವಣೆ ಏನು? ಇಲ್ಲಿದೆ.

ಲಖನೌ(ನ.06): ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಲಖನೌದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯಲಿರುವ 2ನೇ ಪಂದ್ಯ ಗೆದ್ದು ಸರಣಿ ಕೈವಶ ಮಾಡಲು ಟೀಂ ಇಂಡಿಯಾ ಸಜ್ಜಾಗಿದೆ. ಇದಕ್ಕಾಗಿ ತಂಡದಲ್ಲಿ ಒಂದು ಬದಲಾವಣೆ ಮಾಡೋ  ಸಾಧ್ಯತೆ ಇದೆ. 

ಕಳೆದ ಪಂದ್ಯದಿಂದ ಹೊರಗುಳಿದಿದ್ದ ವೇಗಿ ಭುವನೇಶ್ವರ್ ಕುಮಾರ್ ದ್ವಿತೀಯ ಪಂದ್ಯಕ್ಕೆ ಲಭ್ಯರಿದ್ದಾರೆ. ಮೊದಲ ಪಂದ್ಯದಲ್ಲಿ ದುಬಾರಿಯಾದ ವೇಗಿ ಉಮೇಶ್ ಯಾದವ್ ಬದಲು 2ನೇ ಪಂದ್ಯಕ್ಕೆ ಭುವನೇಶ್ವರ್ ಕುಮಾರ್‌ಗೆ ಸ್ಥಾನ ನೀಡೋ ಸಾಧ್ಯತೆ ಹೆಚ್ಚಾಗಿದೆ. ಇನ್ನುಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಗಳಾಗೋ ಸಾಧ್ಯತೆಗಳಿಲ್ಲ.

ಭಾರತ ಸಂಭವನೀಯ ತಂಡ:
ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ರಿಷಬ್ ಪಂತ್, ಮನೀಶ್ ಪಾಂಡೆ, ದಿನೇಶ್ ಕಾರ್ತಿಕ್, ಕ್ರುನಾಲ್ ಪಾಂಡ್ಯ, ಕುಲ್ದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಖಲೀಲ್ ಅಹಮ್ಮದ್, ಭುವನೇಶ್ವರ್ ಕುಮಾರ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?