
ಫ್ಲೋರಿಡಾ(ಆ.03): ವೆಸ್ಟ್ ಇಂಡೀಸ್ ವಿರುದ್ದದ ಸರಣಿಗೆ ಟೀಂ ಇಂಡಿಯಾ ಸಜ್ಜಾಗಿದೆ. ಅಮೆರಿಕದ ಲೌಡರ್‌ಹಿಲ್‌ನಲ್ಲಿ ನಡೆಯಲಿರುವ ಮೊದಲ ಟಿ20 ಪಂದ್ಯದ ಮೂಲಕ ಸರಣಿ ಆರಂಭಗೊಳ್ಳಲಿದೆ. ವಿಶ್ವಕಪ್ ಸೋಲಿನ ಬಳಿಕ ಇದೀಗ ಗೆಲುವಿಗಾಗಿ ಹಾತೊರೆಯುತ್ತಿರುವ ಟೀಂ ಇಂಡಿಯಾ ಶುಭಾರಂಭ ಮಾಡೋ ವಿಶ್ವಾಸದಲ್ಲಿದೆ. ಇಂದಿನ(ಆ.03) ಪಂದ್ಯಕ್ಕೆ ತಂಡದ ಆಯ್ಕೆಗೆ ಟೀಂ ಇಂಡಿಯಾ ಹೆಚ್ಚು ತಲೆ ಕೆಡಿಸಿಕೊಂಡಿದೆ.
ಇದನ್ನೂ ಓದಿ: ಇಂದು ಭಾರತ-ವಿಂಡೀಸ್ ಮೊದಲ ಟಿ20
ನಾಯಕ ವಿರಾಟ್ ಕೊಹ್ಲಿ ಹಾಗೂ ಉಪನಾಯಕ ರೋಹಿತ್ ಶರ್ಮಾ ನಡುವಿನ ಒಳಜಗಳ ಬದಿಗಿಟ್ಟು ಇಂದು ಹೋರಾಟ ನಡೆಸಬೇಕಿದೆ. ಮೊದಲ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ಸಂಭವನೀಯ ತಂಡ ಇಲ್ಲಿದೆ.
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಕೆಎಲ್ ರಾಹುಲ್, ಮನೀಶ್ ಪಾಂಡೆ, ರಿಷಬ್ ಪಂತ್. ಕ್ರುನಾಲ್ ಪಾಂಡ್ಯ, ರಾಹುಲ್ ಚಹಾರ್, ಖಲೀಲ್ ಅಹಮ್ಮದ್, ದೀಪಕ್ ಚಹಾರ್, ನವದೀಪ್ ಸೈನಿ
ಪಂದ್ಯ ಹಾಗೂ ಸಮಯ
ಭಾರತ-ವೆಸ್ಟ್ ಇಂಡೀಸ್ - ಮೊದಲ ಟಿ20
ಸ್ಥಳ: ಫ್ಲೋರಿಡಾ(ಅಮೆರಿಕಾ)
ಸಮಯ; ರಾತಿ 8 ಗಂಟೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.