
ಕೋಲ್ಕತ್ತಾ(ನ.04): ಭಾರತ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಇಳಿದ ವೆಸ್ಟ್ ಇಂಡೀಸ್ ಹಿನ್ನಡೆ ಅನುಭವಿಸಿದೆ. ಈ ಮೂಲಕ ಟಿ20 ಮಾದರಿಯಲ್ಲೂ ವೆಸ್ಟ್ ಇಂಡೀಸ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ವಿಫಲಾವಾಗಿದೆ.
ಆರಂಭಿಕನಾಗಿ ಕಣಕ್ಕಿಳಿದ ದಿನೇಶ್ ರಾಮ್ದಿನ್ ಕೇವಲ 2 ರನ್ ಸಿಡಿಸಿ ಔಟಾದರು. ಶೈ ಹೋಪ್ 14 ರನ್ ಕಾಣಿಕೆ ನೀಡಿದರು. ಶಿಮ್ರೊನ್ ಹೆಟ್ಮೆಯರ್ 10 ರನ್ ಸಿಡಿಸಿ ನಿರ್ಗಮಿಸಿದರೆ, ಹಿರಿಯ ಕ್ರಿಕೆಟಿಗ ಕೀರನ್ ಪೊಲಾರ್ಡ್ 14 ರನ್ ಸಿಡಿಸಿ ಔಟಾದರು.
ಡರೆನ್ ಬ್ರಾವೋ, ರೋವ್ಮಾನ್ ಪೊವೆಲ್ ಹಾಗೂ ಕಾರ್ಲೋಸ್ ಬ್ರಾಥ್ವೈಟ್ ಕೂಡ ಆಸರೆಯಾಗಲಿಲ್ಲ. 63 ರನ್‌ಗಳಿಗೆ ವೆಸ್ಟ್ ಇಂಡೀಸ್ 7 ವಿಕೆಟ್ ಕಳೆದುಕೊಂಡಿದೆ. ಚೊಚ್ಚಲ ಪಂದ್ಯದಲ್ಲಿ ಕ್ರುನಾಲ್ ಪಾಂಡ್ಯ ಮೊದಲ ವಿಕೆಟ್ ಸಂಭ್ರಮ ಆಚರಿಸಿದ್ದಾರೆ. ಕುಲ್ದೀಪ್ ಯಾದವ್ 3 ವಿಕೆಟ್ ಕಬಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.