ಹೈದಾರಾಬಾದ್ ಟೆಸ್ಟ್: ಸಚಿನ್ ದಾಖಲೆ ಮುರಿಯಲು ಸಜ್ಜಾದ ಕೊಹ್ಲಿ!

By Web DeskFirst Published Oct 10, 2018, 4:32 PM IST
Highlights

ವೆಸ್ಟ್ಇಂಡೀಸ್ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ದಾಖಲೆ ಪುಡಿ ಮಾಡಲು ರೆಡಿಯಾಗಿದ್ದಾರೆ. ಇಷ್ಟೇ ಅಲ್ಲ ಆಸ್ಟ್ರೇಲಿಯಾ ದಿಗ್ಗಜ ಡಾನ್ ಬ್ರಾಡ್ಮನ್ ನಂತ್ರದ ಸ್ಥಾನ ಪಡೆಯಲಿದ್ದಾರೆ.

ಹೈದಾರಾಬಾದ್(ಅ.10): ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ತಯಾರಿ ನಡೆಸುತ್ತಿದೆ. ಅಕ್ಟೋಬರ್ 12 ರಿಂದ ಹೈದಾರಾಬಾದ್ ಕ್ರೀಡಾಂಗಣದಲ್ಲಿ 2ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನಡೆಯಲಿದೆ. ಇದೇ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಬರೆಯಲು ಸಜ್ಜಾಗಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸೆಂಚುರಿ ಸಿಡಿಸಿ ಮಿಂಚಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನ 24ನೇ ಶತಕ ದಾಖಲಿಸಿದ್ದರು. ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಸೆಂಚುರಿ ಬಾರಿಸಿದರೆ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ದಾಖಲೆ ಪುಡಿಯಾಗಲಿದೆ. ಇಷ್ಟೇ ಅಲ್ಲ ಆಸ್ಟ್ರೇಲಿಯಾ ದಿಗ್ಗಜ ಡಾನ್ ಬ್ರಾಡ್ಮನ್ ನಂತ್ರದ ಸ್ಥಾನ ಪಡೆಯಲಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಅತೀ ವೇಗದಲ್ಲಿ 25 ಶತಕ ಪೂರೈಸಿದ ಕ್ರಿಕೆಟಿಗರಲ್ಲಿ ಆಸ್ಟ್ರೇಲಿಯಾದ ಡಾನ್ ಬ್ರಾಡ್ಮನ್ ಮೊದಲ ಸ್ಥಾನದಲ್ಲಿದ್ದಾರೆ. ಬ್ರಾಡ್ಮನ್ 68 ಇನ್ನಿಂಗ್ಸ್‌ಗಳಲ್ಲಿ 25 ಶತಕ ಪೂರೈಸಿದ್ದಾರೆ. ಎರಡನೇ ಸ್ಥಾನದಲ್ಲಿರುವ ಸಚಿನ್ ತೆಂಡೂಲ್ಕರ್ 130 ಇನ್ನಿಂಗ್ಸ್‌ಗಳಲ್ಲಿ 25 ಟೆಸ್ಟ್ ಶತಕ ಪೂರೈಸಿದ್ದರು.

ವಿರಾಟ್ ಕೊಹ್ಲಿ 123 ಇನ್ನಿಂಗ್ಸ್‌ಗಳಲ್ಲಿ 24 ಟೆಸ್ಟ್ ಶತಕ ಪೂರೈಸಿದ್ದಾರೆ. ಇದೀಗ 25 ಶತಕ ಸಾಧನೆಗೆ ಇನ್ನೊಂದು ಶತಕ ಅಗತ್ಯವಿದೆ.  ಹೀಗಾಗಿ ವೆಸ್ಟ್ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಸೆಂಚುರಿ ಸಾಧನೆ ಮಾಡಿದರೆ, ಸಚಿನ್ ದಾಖಲೆಯನ್ನ ಹಿಂದಿಕ್ಕಲಿದ್ದಾರೆ.

click me!