
ಹೈದರಾಬಾದ್ (ಅ.12): ಭಾರತ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯ ಪ್ರದರ್ಶನ ನೀಡಿದ್ದ ವೆಸ್ಟ್ಇಂಡೀಸ್ ಇದೀಗ 2ನೇ ಟೆಸ್ಟ್ ಪಂದ್ಯದಲ್ಲಿ ದಿಟ್ಟ ಹೋರಾಟ ನೀಡಿದೆ. ಹೈದರಾಬಾದ್ ಟೆಸ್ಟ್ ಪಂದ್ಯದಲ್ಲಿ ಮೊದಲ ದಿನ ಇನ್ನಿಂಗ್ಸ್ ಆರಂಭಿಸಿದ ವಿಂಡೀಸ್ ಸ್ಪರ್ಧಾತ್ಮಕ ಮೊತ್ತದ ಸೂಚನೆ ನೀಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ವೆಸ್ಟ್ಇಂಡೀಸ್ ಉತ್ತಮ ಆರಂಭ ಪಡೆಯಲಿಲ್ಲ. 32 ರನ್ ಗಳಿಸುವಷ್ಟರಲ್ಲೇ ಮೊದಲ ವಿಕೆಟ್ ಪತನಗೊಂಡಿತು. ಕೀರನ್ ಪೊವೆಲ್ 22 ರನ್ ಸಿಡಿಸಿ ಔಟಾದರು.
ಕ್ರೈಗ್ ಬ್ರಾಥ್ವೈಟ್ ಹಾಗೂ ಶೈ ಹೋಪ್ ಜೊತೆಯಾಟದಿಂದ ವಿಂಡೀಸ್ ಚೇತರಿಸಿಕೊಂಡಿತು. ಆದರೆ ಬ್ರಾಥ್ವೈಟ್ 14 ರನ್ ಸಿಡಿಸಿ ಔಟಾದರು. ದಿಟ್ಟ ಹೋರಾಟ ನೀಡಿದ ಶೈ ಹೋಪ್ 36 ರನ್ ಸಿಡಿಸಿ ಔಟಾದರು.
ಭೋಜನ ವಿರಾಮದ ವೇಳೆ ವೆಸ್ಟ್ಇಂಡೀಸ್ 3 ವಿಕೆಟ್ ನಷ್ಟಕ್ಕೆ 86 ರನ್ ಸಿಡಿಸಿದೆ. ಭಾರತದ ಪರ ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್ ಹಾಗೂ ಉಮೇಶ್ ಯಾದವ್ ತಲಾ ಒಂದು ವಿಕೆಟ್ ಪಡೆದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.