
ರಾಜ್‌ಕೋಟ್(ಅ.05):ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ದಿನವೂ ವೆಸ್ಟ್ಇಂಡೀಸ್ ಹಿನ್ನಡೆ ಅನುಭವಿಸಿದೆ. ಕಳಪೆ ಬೌಲಿಂಗ್ ಪ್ರದರ್ಶನ ನೀಡಿದ ವಿಂಡೀಸ್ ಇದೀಗ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡೋ ಮೂಲಕ 5ನೇ ವಿಕೆಟ್ ಕಳೆದುಕೊಂಡಿದೆ.
ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 649 ರನ್‌ಗೆ ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕುತ್ತರವಾಗಿ ಇನ್ನಿಂಗ್ಸ್ ಆರಂಭಿಸಿದ ವೆಸ್ಟ್ಇಂಡೀಸ್ 2 ರನ್‌ಗಳಿಸುವಷ್ಟರಲ್ಲೇ ಮೊದಲ ವಿಕೆಟ್ ಕಳೆದುಕೊಂಡಿತು. ನಾಯಕ ಕ್ರೈಗ್ ಬ್ರಾಥ್ವೈಟ್ 2 ರನ್ ಸಿಡಿಸಿ ಔಟಾದರು.
ಕೀರನ್ ಪೊವೆಲ್ 1, ಶೈ ಹೋಪ್ 10, ಶಿಮ್ರೋನ್ ಹೆಟ್ಮೆಯರ್ 10 ಹಾಗೂ ಸುನಿಲ್ ಅಂಬ್ರಿಸ್ 12 ರನ್ ಸಿಡಿಸಿ ನಿರ್ಗಮಸಿದರು. ಈ ಮೂಲಕ 49 ರನ್‌ಗಳಿಗೆ ವೆಸ್ಟ್ಇಂಡೀಸ್ ಪ್ರಮುಖ 5 ವಿಕೆಟ್ ಕಳೆದುಕೊಂಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.