
ಕೋಲ್ಕತ್ತಾ(ನ.03): ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ನಾಳೆಯಿಂದ(ನ.04)ರಿಂದ ಆರಂಭಗೊಳ್ಳಲಿದೆ. ಟೆಸ್ಟ್ ಹಾಗೂ ಏಕದಿನ ಸರಣಿ ವಶಪಡಿಸಿಕೊಂಡಿರುವ ಭಾರತ ಇದೀಗ ಟಿ20ಯಲ್ಲೂ ಶುಭಾರಂಭ ಮಾಡೋ ವಿಶ್ವಾಸದಲ್ಲಿದೆ.
ಚುಟುಕು ಮಾದರಿ ಕ್ರಿಕೆಟ್‌ಗೆ ಟೀಂ ಇಂಡಿಯಾ ಹಲವು ಬದಲಾವಣೆ ಮಾಡಿ ತಂಡ ಆಯ್ಕೆ ಮಾಡಿತ್ಕು. ಹಿರಿಯ ಕ್ರಿಕೆಟಿಗ ಎಂ.ಎಸ್ ಧೋನಿಗೆ ರೆಸ್ಟ್ ನೀಡಿ, ಯುವ ಕ್ರಿಕೆಟಿಗ ರಿಷಬ್ ಪಂತ್‌ಗೆ ಸ್ಥಾನ ನೀಡಲಾಗಿದೆ. ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ತಂಡವನ್ನ ಮುನ್ನಡೆಸಲಿದ್ದಾರೆ. ಹಾಗದಾರೆ ನಾಳಿನ ಪಂದ್ಯಕ್ಕೆ ಟೀಂ ಇಂಡಿಯಾ ತಂಡ ಹೇಗಿರಲಿದೆ? ಇಲ್ಲಿದೆ ವಿವರ.
ಆರಂಭಿಕರು: ರೋಹಿತ್ ಶರ್ಮಾ,ಶಿಖರ್ ಧವನ್
ವಿಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ನಿಗಧಿತ ಓವರ್ ಮಾದರಿಯಲ್ಲಿ ಈ ಒಪನಿಂಗ್ ಜೋಡಿ ಅದ್ಬುತ ಪ್ರದರ್ಶನ ನೀಡಿದೆ.
ಮಧ್ಯಮ ಕ್ರಮಾಂಕ: ಕೆಎಲ್ ರಾಹುಲ್, ದಿನೇಶ್ ಕಾರ್ತಿಕ್, ಮನೀಶ್ ಪಾಂಡೆ, ರಿಷಬ್ ಪಂತ್
ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿಯಲ್ಲಿ ಬೆಂಚ್ ಕಾದ ಕನ್ನಡಿಗ ಕೆಎಲ್ ರಾಹುಲ್ ಇದೀಗ ಟಿ20ಯಲ್ಲಿ ಸ್ಥಾನ ಪಡೆಯೋ ಸಾಧ್ಯತೆ ಹೆಚ್ಚಿದೆ. ಇನ್ನು ದಿನೇಶ್ ಕಾರ್ತಿಕ್, ಮನೀಶ್ ಪಾಂಡೆ ಜೊತೆಗೆ ರಿಷಬ್ ಪಂತ್ ವಿಕೆಟ್ ಕೀಪರ್ ಜವಾಬ್ದಾರಿ ನಿರ್ವಹಿಸಲಿದ್ದಾರೆ.
ಆಲ್ರೌಂಡರ್: ಕ್ರುನಾಲ್ ಪಾಂಡ್ಯ
ಹಾರ್ದಿಕ್ ಪಾಂಡ್ಯ ಇಂಜುರಿಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ತಂಡಕ್ಕೆ ಆಯ್ಕೆಯಾಗಿರುವ ಪಾಂಡ್ಯ ಸಹೋದರ ಕ್ರುನಾಲ್ ಪಾಂಡ್ಯ ಟಿ20 ಮಾದರಿಗೆ ಪಾದಾರ್ಪಣೆ ಮಾಡಲಿದ್ದಾರೆ.
ಬೌಲರ್: ಕುಲ್ದೀಪ್ ಯಾದವ್, ಯಜುವೇಂದ್ರ ಚೆಹಾಲ್, ಭುವನೇಶ್ವರ್ ಕುಮಾರ್, ಜಸ್‌ಪ್ರೀತ್ ಬುಮ್ರಾ
ಸ್ಪಿನ್ ವಿಭಾಗದಲ್ಲಿ ಕುಲ್ದೀಪ್ ಯಾದವ್ ಹಾಗೂ ಯಜುವೇಂದ್ರ ಚೆಹಾಲ್ ಸ್ಥಾನ ಪಡೆಯೋದು ಬಹುತೇಕ ಖಚಿತ. ಇನ್ನು ಭುವನೇಶ್ವರ್ ಕುಮಾರ್ ಹಾಗೂ ಜಸ್‌ಪ್ರೀತ್ ಬುಮ್ರಾ ವೇಗಿಗಳ ಜವಾಬ್ದಾರಿ ನಿರ್ವಹಿಸಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.