ಚಿನ್ನ ಗೆದ್ದು ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆಯೇ ಬಿಂದಾಸ್ ಸ್ಟೆಪ್ಸ್ ಹಾಕಿದ ಲಕ್ಷ್ಯ ಸೆನ್..!

By Naveen Kodase  |  First Published Aug 10, 2022, 5:18 PM IST

ಕಾಮನ್‌ವೆಲ್ತ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ ಎರಡು ಪದಕ ಜಯಿಸಿದ ಲಕ್ಷ್ಯ ಸೆನ್
ಬೆಂಗಳೂರಿಗೆ ಬಂದಿಳಿದ ಲಕ್ಷ್ಯ ಸೆನ್‌ಗೆ ಭರ್ಜರಿ ಸ್ವಾಗತ ಕೂರಿದ ಅಭಿಮಾನಿಗಳು
ಅಭಿಮಾನಿಗಳ ನಡುವೆ ಬಿಂದಾಸ್ ಸ್ಟೆಪ್ಸ್ ಹಾಕಿದ ಲಕ್ಷ್ಯ ಸೆನ್


ಬೆಂಗಳೂರು(ಆ.10): ಭಾರತದ ತಾರಾ ಶಟ್ಲರ್ ಲಕ್ಷ್ಯ ಸೆನ್, ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ ಎರಡು ಪದಕಗಳನ್ನು ಗೆಲ್ಲುವ ಮೂಲಕ ಸ್ಮರಣೀಯವಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಭಾರತದ ಉದಯೋನ್ಮುಖ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೆನ್‌, ಬರ್ಮಿಂಗ್‌ಹ್ಯಾಮ್‌ನಿಂದ ಬೆಂಗಳೂರಿಗೆ ಇಂದು ಬಂದಿಳಿದರು. ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ಬೆಂಗಳೂರಿಗೆ ಬಂದಿಗೆ ಲಕ್ಷ್ಯ ಸೆನ್‌ಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. ಇದೇ ವೇಳೆ ಲಕ್ಷ್ಯ ಸೆನ್ ಬಿಂದಾಸ್ ಸ್ಟೆಪ್ಸ್ ಹಾಕುವ ಮೂಲಕ ಮಿಂಚಿದರು.

ಲಕ್ಷ್ಯ ಸೆನ್‌, ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್ ಕ್ರೀಡಾಕೂಟದ ಕೊನೆಯ ದಿನ ನಡೆದ ಪುರಷರ ಸಿಂಗಲ್ಸ್‌ ಬ್ಯಾಡ್ಮಿಂಟನ್ ಫೈನಲ್‌ನಲ್ಲಿ ಮಲೇಷ್ಯಾದ ನಿಗ್ ತ್ಸಿ ಯಂಗ್ ಎದುರು 19-21, 21-19, 21-16 ಗೇಮ್‌ಗಳಿಂದ ಗೆಲುವು ಸಾಧಿಸುವ ಮೂಲಕ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಚೊಚ್ಚಲ ಚಿನ್ನದ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಇದಕ್ಕೂ ಮೊದಲು ಭಾರತ ಮಿಶ್ರ ತಂಡದ ಪರವಾಗಿ ಬೆಳ್ಳಿ ಪದಕ ಜಯಿಸಿದ್ದರು. ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತ ಮಿಶ್ರ ತಂಡ ಕೂಡಾ ಫೈನಲ್ ಪ್ರವೇಶಿಸಿತ್ತಾದರೂ, ಫೈನಲ್‌ನಲ್ಲಿ ಭಾರತ 1-3 ಅಂತರದಲ್ಲಿ ಮಲೇಷ್ಯಾ ಎದುರು ಮುಗ್ಗರಿಸಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತ್ತು.

Tap to resize

Latest Videos

ಲಕ್ಷ್ಯ ಸೆನ್ ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆಯೇ ಅವರಿಗೆ ತಮ್ಮ ಅಭಿಮಾನಿಗಳು ಹಾಗೂ ಆತ್ಮೀಯರಿಂದ ಅದ್ದೂರಿ ಸ್ವಾಗತ ದೊರೆಯಿತು. ಏರ್ಪೋರ್ಟ್‌ ಆವರಣದಲ್ಲಿಯೇ ಡೋಲುಗಳನ್ನು ಬಾರಿಸುವ ಮೂಲಕ ಲಕ್ಷ್ಯ ಸೆನ್‌ ಅವರನ್ನು ಭರ್ಜರಿಯಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಲಕ್ಷ್ಯ ಸೆನ್ ತಾವು ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಗೆದ್ದು ತಂದ ಪದಕಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದರು. ಇಷ್ಟಕ್ಕೇ ಸುಮ್ಮನಾಗದ ಲಕ್ಷ್ಯ ಸೆನ್ ನೆರೆದಿದ್ದ ಆತ್ಮೀಯರ ಜತೆ ಬಿಂದಾಸ್ ಆಗಿ ಹೆಜ್ಜೆಹಾಕುವ ಮೂಲಕ ಗಮನ ಸೆಳೆದರು.

Thank you everyone for such a warm welcome 🙏🏻🇮🇳 https://t.co/PPaTUxkyVh

— Lakshya Sen (@lakshya_sen)

ಈ ಕುರಿತಂತೆ ಟ್ವೀಟ್‌ ಮಾಡಿರುವ ಲಕ್ಷ್ಯ ಸೆನ್‌, ಅದ್ದೂರಿಯಾಗಿ ನನ್ನನ್ನು ಸ್ವಾಗತಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ಟ್ವೀಟ್‌ ಮಾಡಿದ್ದಾರೆ.

ಇನ್ನು ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆಯೇ ಎಎನ್‌ಐ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿದ ಲಕ್ಷ್ಯ ಸೆನ್, ಈ ಹಿಂದೆ ನಾನು ಉತ್ತಮ ಪ್ರದರ್ಶನ ತೋರಿದ್ದರಿಂದಾಗಿ ನನ್ನ ಮೇಲೆ ಸಾಕಷ್ಟು ಒತ್ತಡವಿತ್ತು. ಹೀಗಾಗಿ ಪದಕ ಗೆಲ್ಲುವುದು ಅಷ್ಟು ಸುಲಭವಲ್ಲ ಎಂದು ನನಗೆ ಗೊತ್ತಿತ್ತು. ಆದರೆ ನನ್ನ ಸಾಮರ್ಥ್ಯದ ಬಗ್ಗೆ ನನಗೆ ವಿಶ್ವಾಸವಿತ್ತು. ಏರ್ಪೋರ್ಟ್‌ಗೆ ಬಂದು ಸ್ವಾಗತಿಸಿದಕ್ಕೆ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.  

ಬೆಂಗಳೂರಲ್ಲಿ Commomwealth Games ಪದಕ ವಿಜೇತ ಅಥ್ಲೀಟ್‌ಗಳಿಗೆ ಸನ್ಮಾನ!

ಜುಲೈ 28ರಿಂದ ಆಗಸ್ಟ್ 08ರವರೆಗೆ ನಡೆದ ಕಾಮನ್‌ವೆಲ್ತ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ ಭಾರತದಿಂದ 200ಕ್ಕೂ ಅಧಿಕ ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್‌ ಕೂಟದಲ್ಲಿ 61 ಪದಕ ಗೆಲ್ಲುವ ಮೂಲಕ ಭಾರತವು ಪದಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆಯಿತು.  ಇದರಲ್ಲಿ 22 ಬಂಗಾರ, 16 ಬೆಳ್ಳಿ ಹಾಗೂ 23 ಕಂಚಿನ ಪದಕಗಳು ಸೇರಿದ್ದವು. ಇನ್ನು ಕುಸ್ತಿ ವಿಭಾಗದಲ್ಲಿ ಭಾರತ 6 ಚಿನ್ನ ಸಹಿತ 12 ಪದಕಗಳನ್ನು ಜಯಿಸಿದರೇ, ವೇಟ್‌ಲಿಫ್ಟಿಂಗ್‌ನಲ್ಲಿ 10 ಪದಕ ಗೆಲ್ಲುವಲ್ಲಿ ಭಾರತ ಯಶಸ್ವಿಯಾಗಿದೆ.

click me!