ಮುರಳಿ ವಿಜಯ್'ಗೆ ಮತ್ತೆ ಗಾಯದ ಸಮಸ್ಯೆ..!

Published : Oct 09, 2017, 12:34 PM ISTUpdated : Apr 11, 2018, 01:01 PM IST
ಮುರಳಿ ವಿಜಯ್'ಗೆ ಮತ್ತೆ ಗಾಯದ ಸಮಸ್ಯೆ..!

ಸಾರಾಂಶ

ಆಂಧ್ರ ಪ್ರದೇಶ ವಿರುದ್ಧ ರಣಜಿ ಪಂದ್ಯದ ವೇಳೆ ಪಾದದ ಗಾಯಕ್ಕೆ ತುತ್ತಾಗಿದ್ದಾರೆ. ಎರಡನೇ ಇನ್ನಿಂಗ್ಸ್‌'ನಲ್ಲಿ ಬ್ಯಾಟಿಂಗ್ ಮಾಡುವ ವೇಳೆ ವಿಜಯ್ ಗಾಯಗೊಂಡು ಮೈದಾನದಿಂದ ಹೊರನಡೆದರು.

ಚೆನ್ನೈ(ಅ.09): ಆರಂಭಿಕ ಬ್ಯಾಟ್ಸ್‌ಮನ್ ಮುರಳಿ ವಿಜಯ್ ಮತ್ತೊಮ್ಮೆ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.

ಆಂಧ್ರ ಪ್ರದೇಶ ವಿರುದ್ಧ ರಣಜಿ ಪಂದ್ಯದ ವೇಳೆ ಪಾದದ ಗಾಯಕ್ಕೆ ತುತ್ತಾಗಿದ್ದಾರೆ. ಎರಡನೇ ಇನ್ನಿಂಗ್ಸ್‌'ನಲ್ಲಿ ಬ್ಯಾಟಿಂಗ್ ಮಾಡುವ ವೇಳೆ ವಿಜಯ್ ಗಾಯಗೊಂಡು ಮೈದಾನದಿಂದ ಹೊರನಡೆದರು.

ಭಾರತ ತಂಡಕ್ಕೆ ಮರಳುವ ವಿಶ್ವಾಸದಲ್ಲಿರುವ ವಿಜಯ್‌ಗೆ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಿವೆ. ಈ ವರ್ಷದ ಆರಂಭದಲ್ಲಿ ವಿಜಯ್ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಮೊಣಕೈ ಗಾಯದ ಸಮಸ್ಯೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರಿಂದ ಐಪಿಎಲ್‌'ನಿಂದಲೂ ದೂರ ಉಳಿದಿದ್ದರು. ನಂತರ ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದರಾದರೂ, ಮೊಣಕೈ ನೋವಿನಿಂದ ಸರಣಿಯಿಂದ ಹಿಂದೆ ಸರಿಯಬೇಕಾಗಿತ್ತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026 ಡೆಲ್ಲಿ ಕ್ಯಾಪಿಟಲ್ಸ್‌ಗೆ ಹೊಸ ನಾಯಕ ಫಿಕ್ಸ್; ಅಕ್ಷರ್ ಪಟೇಲ್‌ಗೆ ಕ್ಯಾಪ್ಟನ್ಸಿಯಿಂದ ಗೇಟ್‌ಪಾಸ್?
ಧೋನಿಯನ್ನೇ ಬೆರಗುಗೊಳಿಸಿದ 4ರ ಪೋರಿಯ ಬ್ಯಾಟಿಂಗ್: ವೀಡಿಯೋ ವೈರಲ್