
ದುಬೈ(ಸೆ.30): ಏಷ್ಯಾಕಪ್ ಟೂರ್ನಿ ಮುಕ್ತಾಯದ ಬೆನ್ನಲ್ಲೇ ಐಸಿಸಿ ರ‍್ಯಾಂಕಿಂಗ್ ಪ್ರಕಟಗೊಂಡಿದೆ. ಏಷ್ಯಾಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾವನ್ನ ಮುನ್ನಡೆಸಿದ ರೋಹಿತ್ ಶರ್ಮಾ, ಬ್ಯಾಟಿಂಗ್ ಮೂಲಕವೂ ಗಮನಸೆಳೆದಿದ್ದರು. ಇದೀಗ ರೋಹಿತ್ ರ‍್ಯಾಂಕಿಂಗ್‌ನಲ್ಲೂ ಬಡ್ತಿ ಪಡೆದಿದ್ದಾರೆ.
ಏಷ್ಯಾಕಪ್ ಟೂರ್ನಿಯ 5 ಇನ್ನಿಂಗ್ಸ್‌ಗಳಲ್ಲಿ ರೋಹಿತ್ ಶರ್ಮಾ 317 ರನ್ ಸಿಡಿಸಿದ್ದರು. ಈ ಮೂಲಕ ಏಕದಿನ ರ‍್ಯಾಂಕಿಂಗ್‌ನಲ್ಲಿ 4ನೇ ಸ್ಥಾನದಲ್ಲಿದ್ದ ರೋಹಿತ್ ಶರ್ಮಾ ಇದೀಗ 2ನೇ ಸ್ಥಾನಕ್ಕೇರಿದ್ದಾರೆ. ಮೊದಲ ಸ್ಥಾನದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರಾಜಮಾನರಾಗಿದ್ದಾರೆ.
ಏಕದಿನ ಬೌಲರ್‌ಗಳ ರ‍್ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾ ವೇಗಿ ಜಸ್‌ಪ್ರೀತ್ ಬುಮ್ರಾ ಮೊದಲ ಸ್ಥಾನ ಅಲಂಕರಿಸಿದ್ದಾರೆ. ಟೂರ್ನಿಯಲ್ಲಿ ಮಿಂಚಿದ ಅಫ್ಘಾನಿಸ್ತಾನ ಸ್ಪಿನ್ನರ್ ರಶೀದ್ ಖಾನ್ 2ನೇ ಸ್ಥಾನಕ್ಕೇರಿದ್ದಾರೆ. ಏಕದಿನ ಆಲ್ರೌಂಡರ್ ವಿಭಾಗದಲ್ಲಿ ರಶೀದ್ ಖಾನ್ ಮೊದಲ ಸ್ಥಾನ ಅಲಂಕರಿಸೋ ಮೂಲಕ ಅದ್ವಿತೀಯ ಸಾಧನೆ ಮಾಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.