
ಮುಂಬೈ(ಆ.22): ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯ ಗೆಲುವಿನ ಬೆನ್ನಲ್ಲೇ ಅಂತಿಮ 2 ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಆಯ್ಕೆ ಮಾಡಲಾಗಿದೆ. ವಿಶೇಷ ಅಂದರೆ 18ರ ಪೋರ ಪೃಥ್ವಿ ಶಾ ತಂಡದಲ್ಲಿ ಸ್ಥಾನ ಪಡೆಯೋ ಮೂಲಕ ಸಾಧನೆ ಮಾಡಿದ್ದಾರೆ.
ಇಂಗ್ಲೆಂಡ್ ವಿರುದ್ಧ ಆರಂಭಿಕ 2 ಪಂದ್ಯ ಸೋತು 3ನೇ ಪಂದ್ಯ ಗೆದ್ದು ಸರಣಿಯಲ್ಲಿ ಕಮ್‌ಬ್ಯಾಕ್ ಮಾಡಿರುವ ಟೀಂ ಇಂಡಿಯಾ ಇದೀಗ ಅಂತಿಮ 2 ಟೆಸ್ಟ್ ಪಂದ್ಯ ಗೆಲ್ಲೋ ವಿಶ್ವಾಸದಲ್ಲಿದೆ. ಇದಕ್ಕಾಗಿ ತಂಡದಲ್ಲಿ ಕೆಲ ಬದಲಾವಣೆ ಮಾಡಲಾಗಿದೆ.
ಕಲಪೆ ಪಾರ್ಮ್‌ನಲ್ಲಿದ್ದ ಮುರಳಿ ವಿಜಯ್ ಹಾಗೂ ಯುವ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನ ಕೈಬಿಡಲಾಗಿದೆ. ಬದಲಾಗಿ ಪೃಥ್ವಿ ಶಾ ಹಾಗೂ ಆಂಧ್ರಪ್ರದೇಶದ ಹನುಮಾ ವಿಹಾರಿ ಸ್ಥಾನ ಪಡೆಕೊಂಡಿದ್ದಾರೆ. ವೇಗಿ ಶಾರ್ದೂಲ್ ಠಾಕೂರ್ ಟೀಂ ಇಂಡಿಯಾಗೆ ವಾಪಾಸ್ಸಾಗಿದ್ದಾರೆ.
ಅಂತಿಮ 2 ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ
ವಿರಾಟ್ ಕೊಹ್ಲಿ(ನಾಯಕ),ಶಿಖರ್ ಧವನ್, ಕೆಎಲ್ ರಾಹುಲ್, ಅಜಿಂಕ್ಯ ರಹಾನೆ, ಪೃಥ್ವಿ ಶಾ, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಜಸ್‌ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಕರುಣ್ ನಾಯರ್, ದಿನೇಶ್ ಕಾರ್ತಿಕ್, ಹನುಮಾ ವಿಹಾರಿ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.