
ಕೌಲಾಲಂಪುರ[ಏ.12]: ಭಾರತ ಮಹಿಳಾ ಹಾಕಿ ತಂಡ, ಮಲೇಷ್ಯಾ ಪ್ರವಾಸವನ್ನು ಅಜೇಯವಾಗಿ ಮುಕ್ತಾಯಗೊಳಿಸಿದೆ.
ಗುರುವಾರ ನಡೆದ 5ನೇ ಹಾಗೂ ಅಂತಿಮ ಪಂದ್ಯವನ್ನು 1-0 ಗೋಲುಗಳಿಂದ ಗೆಲ್ಲುವ ಮೂಲಕ, ಸರಣಿಯನ್ನು 4-0 ಅಂತರದಲ್ಲಿ ಭಾರತ ತನ್ನದಾಗಿಸಿಕೊಂಡಿತು. ಒಲಿಂಪಿಕ್ಸ್ ಅರ್ಹತಾ ಸುತ್ತಿಗೂ ಮೊದಲು ಈ ಸರಣಿ ಜಯ, ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ. ಗುರುವಾರದ ಪಂದ್ಯದಲ್ಲಿ ಭಾರತ ಪರ ನವ್‌ಜೋತ್ ಕೌರ್ 35ನೇ ನಿಮಿಷದಲ್ಲಿ ಗೋಲು ಬಾರಿಸಿದರು.
ಮೊದಲ ಪಂದ್ಯದಲ್ಲಿ 3-0ಯಿಂದ ಗೆದ್ದಿದ್ದ ಭಾರತ, 2ನೇ ಪಂದ್ಯದಲ್ಲಿ 5-0ಯಿಂದ ಜಯಸಿತ್ತು. 3ನೇ ಪಂದ್ಯವನ್ನು 4-4ರಲ್ಲಿ ಡ್ರಾ ಮಾಡಿಕೊಂಡಿದ್ದ ತಂಡ, 4ನೇ ಪಂದ್ಯವನ್ನು 1-0 ಗೋಲಿನಿಂದ ಜಯಿಸಿತ್ತು.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.