
ಜಕಾರ್ತ[ಜ.26]: ಭಾರತದ ತಾರಾ ಶಟ್ಲರ್ ಸೈನಾ ನೆಹ್ವಾಲ್, ಇಂಡೋನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸೆಮಿಫೈನಲ್‌ಗೇರಿದ್ದಾರೆ. ಆದರೆ ಒಲಿಂಪಿಕ್ಸ್ ಬೆಳ್ಳಿ ವಿಜೇತೆ ಪಿ.ವಿ.ಸಿಂಧು ಮತ್ತು ಕಿದಂಬಿ ಶ್ರೀ ಕಾಂತ್ ಕ್ವಾರ್ಟರ್ ಫೈನಲ್‌ನಲ್ಲಿ ಮುಗ್ಗರಿಸಿ ನಿರಾಸೆಅನುಭವಿಸಿದರು.
ಶುಕ್ರವಾರ ನಡೆದ ಮಹಿಳಾ ಸಿಂಗಲ್ಸ್'ನ ಕ್ವಾರ್ಟರ್‌ನಲ್ಲಿ ಸೈನಾ, ಥಾಯ್ಲೆಂಡ್‌ನ ಪೂರ್ನಾಪಾವಿ ಚೊಚುವಾಂಗ್ ವಿರುದ್ಧ 21-17, 21-18 ನೇರ ಗೇಮ್‌ಗಳಲ್ಲಿ ಗೆದ್ದು, ಅಂತಿಮ 4ರ ಘಟ್ಟಕ್ಕೆ ಲಗ್ಗೆ ಇಟ್ಟರು.
ಮತ್ತೊಂದು ಸಿಂಗಲ್ಸ್‌ನಲ್ಲಿ ಸಿಂಧು, ಸ್ಪೇನ್‌ನ ಕ್ಯಾರೋಲಿನಾ ಮರಿನ್ ಎದುರು 11-21, 12-21 ನೇರ ಗೇಮ್‌ಗಲ್ಲಿ ಪರಾಭವಗೊಂಡರು. ಪುರುಷರ ಸಿಂಗಲ್ಸ್ ಕ್ವಾರ್ಟರ್‌ನಲ್ಲಿ ಶ್ರೀಕಾಂತ್, ಸ್ಥಳೀಯ ಶಟ್ಲರ್ ಜೋ ನಾಥನ್ ಕ್ರಿಸ್ಟಿ ಎದುರು 18-21, 19-21 ನೇರ ಗೇಮ್‌ಗಳಿಂದ ಸೋಲುಂಡು ಹೊರಬಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.