
ನವದೆಹಲಿ(ಮೇ.06): ಗುಜರಾತ್ ಲಯನ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಬ್ರೆಂಡನ್ ಮೆಕ್ಕಲಂ ಸ್ನಾಯು ಸೆಳೆತಕ್ಕೆ ಒಳಗಾಗಿದ್ದು ಪ್ರಸಕ್ತ ಐಪಿಎಲ್ ಪಂದ್ಯಾವಳಿಯಿಂದ ಹೊರಬಿದ್ದಿದ್ದಾರೆ. ಗುರುವಾರ ಡೆಲ್ಲಿ ಡೇರ್‌ಡೆವಿಲ್ಸ್ ವಿರುದ್ಧ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಪಂದ್ಯದ ವೇಳೆ ಅವರು ಗಾಯಗೊಂಡಿದ್ದಾಗಿ ಐಪಿಎಲ್ ಪ್ರಕಟಣೆ ತಿಳಿಸಿದೆ.
ನ್ಯೂಜಿಲೆಂಡ್ ಮಾಜಿ ನಾಯಕ 3ರಿಂದ 4 ವಾರಗಳ ಕಾಲ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಆವೃತ್ತಿಯಲ್ಲಿ 11 ಪಂದ್ಯಗಳನ್ನಾಡಿದ ಮೆಕ್ಕಲಂ 2 ಅರ್ಧಶತಕಗಳೊಂದಿಗೆ 319 ರನ್ ಕಲೆಹಾಕಿದ್ದಾರೆ.
ಇದೇ ವೇಳೆ ತಂಡದ ವೇಗದ ಬೌಲರ್ ನಾಥು ಸಿಂಗ್ ಸಹ ಗಾಯದ ಸಮಸ್ಯೆಯಿಂದಾಗಿ ಪಂದ್ಯಾವಳಿಯಿಂದ ಹೊರಬಿದ್ದಿದ್ದಾರೆ. ರಾಜ್‌ಕೋಟ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ನಡೆದ ಪಂದ್ಯದ ವೇಳೆ ಬೆನ್ನು ನೋವಿಗೆ ತುತ್ತಾದ ಅವರು, ಆನಂತರ ಯಾವುದೇ ಪಂದ್ಯದಲ್ಲಿ ಕಣಕ್ಕಿಳಿಯಲಿಲ್ಲ. ಈ ಆವೃತ್ತಿಯಲ್ಲಿ ನಾಥು ಸಿಂಗ್ ಕೇವಲ 2 ಪಂದ್ಯಗಳನ್ನಷ್ಟೇ ಆಡಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.