
ಬೆಂಗಳೂರು(ಅ.09): ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಭಾರತವನ್ನು ತೊರೆದಿದ್ದಾರೆ. ಭುಜದ ನೋವು ತೀವ್ರಗೊಂಡ ಹಿನ್ನಲೆಯಲ್ಲಿ ಸ್ಮಿತ್ ತವರಿಗೆ ಮರಳಿದ್ದಾರೆ. ಈಗಾಗಲೇ ಏಕದಿನ ಸರಣಿ ಕೈಚೆಲ್ಲಿ, ಮೊದಲ ಟಿ20 ಪಂದ್ಯದಲ್ಲೂ ನಿರಾಸೆ ಅನುಭವಿಸಿದ್ದ ಆಸೀಸ್ ಪಡೆಗೆ ಗಾಯದ ಮೇಲೆ ಬರೆ ಎಳೆದಂತಾ
ಸ್ಟೀವ್ ಸ್ಮಿತ್ 5ನೇ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವ ಸಂದರ್ಭದಲ್ಲಿ ಡೈವ್ ಹೊಡೆಯುವಾಗ ಬಲ ಭುಜಕ್ಕೆ ಗಾಯ ಮಾಡಿಕೊಂಡಿದ್ದರು. ಎಂಆರ್'ಐ ಸ್ಕ್ಯಾನ್ ಮಾಡಿದಾಗ, ಗಾಯದ ಪ್ರಮಾಣ ತೀವ್ರವಾಗಿರುವುದು ಕಂಡು ಬಂದ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ತವರಿಗೆ ಮರಳಿದ್ದಾರೆ.
ಮೊದಲ ಟಿ20 ಪಂದ್ಯದಲ್ಲಿ ಸ್ಮಿತ್ ಹೊರಗುಳಿದಿದ್ದರು. ಮುಂದಿನ 2 ಪಂದ್ಯಗಳಿಗೆ ಸ್ಮಿತ್ ಸ್ಥಾನವನ್ನು ಮಾರ್ಕಸ್ ಸ್ಟೋನಿಸ್ ತುಂಬಲಿದ್ದಾರೆ ಎಂದು ಆಸ್ಟ್ರೇಲಿಯಾ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.