
ಮುಂಬೈ(ಮೇ.01): ಐಪಿಎಲ್ ಪ್ಲೇ-ಆಫ್ ಪಂದ್ಯಗಳ ಟಿಕೆಟ್ ಮಾರಾಟದಿಂದ ಬಿಸಿಸಿಐ 20 ಕೋಟಿ ರುಪಾಯಿ ಗಳಿಸುವ ನಿರೀಕ್ಷೆಯಲ್ಲಿದೆ. ಲೀಗ್ ಹಂತದ ಪಂದ್ಯಗಳ ಟಿಕೆಟ್ ಮಾರಾಟದಿಂದ ಬರುವ ಹಣ ಫ್ರಾಂಚೈಸಿಗಳ ಪಾಲಾಗಲಿದೆ. ಪ್ಲೇ-ಆಫ್‌ನ ಟಿಕೆಟ್ ಮಾರಾಟದ ಹಣದ ಮಾತ್ರ ಬಿಸಿಸಿಐ ಖಜಾನೆ ಸೇರಲಿದೆ.
IPL ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ CSK
ಚೆನ್ನೈ ಕ್ರೀಡಾಂಗಣದಲ್ಲಿ ಕೆಲ ಸ್ಟ್ಯಾಂಡ್‌ಗಳಿಗೆ ಪ್ರವೇಶ ನಿರ್ಬಂಧಿಸಿರುವ ಕಾರಣ, ಟಿಕೆಟ್ ನಷ್ಟವಾಗಲಿದೆ ಎನ್ನುವ ಕಾರಣಕ್ಕೆ ಫೈನಲ್ ಪಂದ್ಯವನ್ನು ಚೆನ್ನೈನಿಂದ ಹೈದರಾಬಾದ್‌ಗೆ ಸ್ಥಳಾಂತರಿಸಲಾಯಿತು. ಕಳೆದ ವರ್ಷ ಪ್ಲೇ-ಆಫ್ ಟಿಕೆಟ್ ಮಾರಾಟದಿಂದ ಬಿಸಿಸಿಐ 18 ಕೋಟಿ ರುಪಾಯಿ ಗಳಿಸಿತ್ತು. ಈ ವರ್ಷ ಹೆಚ್ಚುವರಿ 2 ಕೋಟಿ ರುಪಾಯಿ ಗಳಿಸುವ ನಿರೀಕ್ಷೆಯಲ್ಲಿದೆ.
ಪಂದ್ಯ ಗೆಲ್ಲಿಸಿ IPLಗೆ ಗುಡ್’ಬೈ ಹೇಳಿದ ವಾರ್ನರ್ ಹೇಳಿದ್ದಿಷ್ಟು...
12ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಈಗಾಗಲೇ ಚೆನ್ನೈ ಸೂಪರ್’ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪ್ಲೇ ಆಫ್ ಪ್ರವೇಶಿಸಿವೆ. ಇನ್ನುಳಿದ 2 ಸ್ಥಾನಗಳಿಗೆ ಮುಂಬೈ ಇಂಡಿಯನ್ಸ್, ಸನ್’ರೈಸರ್ಸ್ ಹೈದರಾಬಾದ್, ಕೋಲ್ಕತಾ ನೈಟ್’ರೈಡರ್ಸ್, ಪಂಜಾಬ್ ಸೂಪರ್’ಕಿಂಗ್ಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.