CSK, ಧೋನಿ ಅಭಿಮಾನಿಗಳ ಪಾಲಿಗಿದು ಸಿಹಿಸುದ್ದಿ..!

Published : May 17, 2019, 10:06 AM IST
CSK, ಧೋನಿ  ಅಭಿಮಾನಿಗಳ ಪಾಲಿಗಿದು ಸಿಹಿಸುದ್ದಿ..!

ಸಾರಾಂಶ

ವಿಶ್ವಕಪ್ ಟೂರ್ನಿಯ ಬಳಿಕ ಧೋನಿ ವಿದಾಯ ಹೇಳಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಧೋನಿ ಅಭಿಮಾನಿಗಳ ಪಾಲಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಏನದು ಸ್ಟೋರಿ ಎಂದು ನೀವೇ ಒಮ್ಮೆ ನೋಡಿ... 

ಚೆನ್ನೈ(ಮೇ.17): ಐಸಿಸಿ ಏಕದಿನ ವಿಶ್ವಕಪ್ ಬಳಿಕ ಎಂ.ಎಸ್.ಧೋನಿ ನಿವೃತ್ತಿ ಪಡೆಯಲಿದ್ದಾರೆ. ಇದು ಅವರ ಕೊನೆ ಐಪಿಎಲ್ ಆಗಿತ್ತು ಎನ್ನುವ ಸುದ್ದಿ ಎಲ್ಲೆಡೆ ಹಬ್ಬಿದೆ. ಆದರೆ ಧೋನಿ ಅಭಿಮಾನಿಗಳಿಗೆ ಚೆನ್ನೈ ಸೂಪರ್ ಕಿಂಗ್ಸ್'ನ ಮುಖ್ಯ ಕಾರ್ಯನಿವಾರ್ಹಕ ಅಧಿಕಾರಿ (ಸಿಇಒ) ಕಾಶಿ ವಿಶ್ವನಾಥನ್ ಸಿಹಿ ಸುದ್ದಿ ನೀಡಿದ್ದಾರೆ.

ಧೋನಿ 2020ರ ಐಪಿಎಲ್'ನಲ್ಲಿ ಚೆನ್ನೈ ತಂಡದಲ್ಲಿ ಆಡಲಿದ್ದಾರೆ ಎಂದು ಅವರು ಮಾಧ್ಯಮವೊಂದಕ್ಕೆ ನೀಡುವ ಸಂದರ್ಶನದಲ್ಲಿ ತಿಳಿಸಿದ್ದಾರೆ. ‘ಧೋನಿ ಮುಂದಿನ ವರ್ಷ ಐಪಿಎಲ್'ನಲ್ಲಿ ಆಡಲಿದ್ದಾರೆ ಎನ್ನುವ ನಂಬಿಕೆ ನನಗಿದೆ. ಕಳೆದ 2 ವರ್ಷದಿಂದ ಅವರ ಬ್ಯಾಟಿಂಗ್ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಹಲವರು ಅವರನ್ನು ಟೀಕಿಸುತ್ತಿದ್ದಾರೆ. ಆದರೆ ಅಂಕಿ-ಅಂಶಗಳನ್ನು ನೋಡಿದಾಗ ಧೋನಿ ಆಟ ಉತ್ತಮವಾಗಿದೆ. 2018ರಲ್ಲಿ ಅತ್ಯುತ್ತಮ ಪ್ರದರ್ಶನ ತೋದಿದ್ದ ಧೋನಿ, ಈ ವರ್ಷವೂ ಮಿಂಚಿನ ಆಟವಾಡಿದರು. ವಿಶ್ವಕಪ್'ನಲ್ಲಿ ಅವರ ಪಾತ್ರ ಪಮುಖವೆನಿಸಲಿದೆ. ಧೋನಿ ಬಗ್ಗೆ ನನಗೆ ಗೊತ್ತಿದೆ. ಅವರು ಮುಂದಿನ ವರ್ಷ ಖಂಡಿತವಾಗಿಯೂ ಐಪಿಎಲ್'ನಲ್ಲಿ ಆಡಲಿದ್ದಾರೆ’ ಎಂದು ವಿಶ್ವನಾಥನ್ ಹೇಳಿದ್ದಾರೆ.

ಎರಡು ವರ್ಷಗಳ ಬಳಿಕ ಐಪಿಎಲ್'ಗೆ ಕಮ್'ಬ್ಯಾಕ್ ಮಾಡಿದ್ದ ಧೋನಿ ನೇತೃತ್ವದ ಚೆನ್ನೈ ಸೂಪರ್'ಕಿಂಗ್ಸ್ ತಂಡವು 2018ರಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇನ್ನು 12ನೇ ಆವೃತ್ತಿಯ ಫೈನಲ್'ನಲ್ಲಿ ಮುಂಬೈ ಇಂಡಿಯನ್ಸ್ ಎದುರು ಸೋತು ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ
ನಾನು ಮೋಸ ಮಾಡಿಲ್ಲ, ಗಾಸಿಪ್‌ ನಂಬಬೇಡಿ ಎಂದ Palash Muchhal; ಮದುವೆ ಕ್ಯಾನ್ಸಲ್‌ ಎಂದ Smriti Mandhana