IPL 12: ಲೀಗ್ ಹಂತ ಇಂದು ಮುಕ್ತಾಯ; ಅಂಕಪಟ್ಟಿಯಲ್ಲಿ ಮೇಲೇರಿದ RCB

Published : May 05, 2019, 02:21 PM IST
IPL 12: ಲೀಗ್ ಹಂತ ಇಂದು ಮುಕ್ತಾಯ; ಅಂಕಪಟ್ಟಿಯಲ್ಲಿ ಮೇಲೇರಿದ RCB

ಸಾರಾಂಶ

ಮೊಹಾಲಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್ ಸೆಣೆಸಿದರೆ, ರಾತ್ರಿ 8ಕ್ಕೆ ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತಾ ನೈಟ್‌ರೈಡರ್ಸ್‌ ವಿರುದ್ಧ ಪಂದ್ಯ ನಡೆಯುವ ಮೂಲಕ ಈ ಆವೃತ್ತಿಯ ಲೀಗ್‌ಗೆ ತೆರೆ ಬೀಳಲಿದೆ.

ಮುಂಬೈ(ಮೇ.05): ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 12ನೇ ಆವೃತ್ತಿಯ ಅಂತಿಮ ಹಂತದತ್ತ ಸಾಗಿದ್ದು, ಭಾನುವಾರ ಲೀಗ್ ಹಂತದ ಕೊನೆಯ ಪಂದ್ಯಗಳು ನಡೆಯಲಿವೆ. 

ಮೊಹಾಲಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್ ಸೆಣೆಸಿದರೆ, ರಾತ್ರಿ 8ಕ್ಕೆ ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತಾ ನೈಟ್‌ರೈಡರ್ಸ್‌ ವಿರುದ್ಧ ಪಂದ್ಯ ನಡೆಯುವ ಮೂಲಕ ಈ ಆವೃತ್ತಿಯ ಲೀಗ್‌ಗೆ ತೆರೆ ಬೀಳಲಿದೆ. ಮೇ 7ರಿಂದ ಪ್ಲೇ-ಆಫ್ ಪಂದ್ಯಗಳು ಶುರುವಾಗಲಿದೆ. 12ರಂದು ಹೈದರಾಬಾದ್‌ನಲ್ಲಿ ಫೈನಲ್ ನಡೆಯಲಿದೆ.

ಶನಿವಾರ ನಡೆದ ರಾಜಸ್ಥಾನ ರಾಯಲ್ಸ್-ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಡೆಲ್ಲಿ ಭರ್ಜರಿ ಜಯಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ. ಇನ್ನು ಬೆಂಗಳೂರಿನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಹೈದರಾಬಾದ್ ತಂಡಕ್ಕೆ ಆಘಾತ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂಕಪಟ್ಟಿಯಲ್ಲಿ ಒಂದು ಸ್ಥಾನ ಮೇಲೇರಿದ್ದು 7ನೇ ಸ್ಥಾನಕ್ಕೆ ಲಗ್ಗೆಯಿಡುವುದರ ಮೂಲಕ 12ನೇ ಆವೃತ್ತಿಯ ಐಪಿಎಲ್’ನಲ್ಲಿ ತನ್ನ ಅಭಿಯಾನ ಅಂತ್ಯಗೊಳಿಸಿದೆ. 


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ
ನಾನು ಮೋಸ ಮಾಡಿಲ್ಲ, ಗಾಸಿಪ್‌ ನಂಬಬೇಡಿ ಎಂದ Palash Muchhal; ಮದುವೆ ಕ್ಯಾನ್ಸಲ್‌ ಎಂದ Smriti Mandhana