IPL ರದ್ದುಗೊಳಿಸಿ ಎಂದು ಹೈಕೋರ್ಟ್ ಮೆಟ್ಟಿಲೇರಿದ IPS ಅಧಿಕಾರಿ..!

By Suvarna Web DeskFirst Published Apr 5, 2018, 4:04 PM IST
Highlights

11ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಏಪ್ರಿಲ್ 7ರಿಂದ ಆರಂಭವಾಗಲಿದ್ದು, ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್'ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಮುಂಬೈ(ಏ.05): ಮ್ಯಾಚ್ ಫಿಕ್ಸಿಂಗ್, ಬೆಟ್ಟಿಂಗ್ ಪ್ರಕರಣಗಳ ವಿರುದ್ಧ ಬಿಸಿಸಿಐ ಸರಿಯಾದ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ, ಈ ಆವೃತ್ತಿಯ ಐಪಿಎಲ್ ರದ್ದುಗೊಳಿಸಬೇಕು ಎಂದು ಐಪಿಎಸ್ ಅಧಿಕಾರಿ ಜಿ.ಸಂಪತ್ ಕುಮಾರ್, ಮದ್ರಾಸ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

‘ನ್ಯಾ.ಲೋಧಾ ಸಮಿತಿ ವರದಿಗೆ ವಿರುದ್ಧವಾಗಿ, ಐಪಿಎಲ್‌'ನಲ್ಲಿ ಇನ್ನೂ ಕಳಂಕಿತರನ್ನು ರಕ್ಷಿಸಲಾಗುತ್ತಿದೆ, ಹಿತಾಸಕ್ತಿ ಸಂಘರ್ಷ ವಿರುದ್ಧ ಬಿಸಿಸಿಐ ಸೂಕ್ತ ಕ್ರಮ ಕೈಗೊಂಡಿಲ್ಲ’ ಎಂದು ಸಂಪತ್ ಕುಮಾರ್ ಆರೋಪಿಸಿದ್ದಾರೆ. 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣದ ತನಿಖೆಯಲ್ಲಿ ಸಂಪತ್ ಕುಮಾರ್ ಭಾಗಿಯಾಗಿದ್ದರು.

11ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಏಪ್ರಿಲ್ 7ರಿಂದ ಆರಂಭವಾಗಲಿದ್ದು, ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್'ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

click me!