
ಬೆಂಗಳೂರು[ಮೇ.18]: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್’ರೈಸರ್ಸ್ ಹೈದರಾಬಾದ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಚಿನ್ನಸ್ವಾಮಿ ಮೈದಾನ ಸಾಕ್ಷಿಯಾಗಿತ್ತು.
ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಸನ್’ರೈಸರ್ಸ್ ಹೈದರಾಬಾದ್ ತಂಡವನ್ನು ಆರ್’ಸಿಬಿ ಬಗ್ಗುಬಡಿದು ತನ್ನ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್’ನಲ್ಲಿ ಸಾಂಘಿಕ ಪ್ರದರ್ಶನ ತೋರಿದ ಆರ್’ಸಿಬಿ 14 ರನ್’ಗಳ ರೋಚಕ ಜಯ ಸಾಧಿಸಿ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ.
ಆದರೆ ಈ ಪಂದ್ಯದಲ್ಲಿ ಹೈಡ್ರಾಮಾವೊಂದು ನಡೆದದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಆರ್’ಸಿಬಿ ಪರ ಉಮೇಶ್ ಯಾದವ್ ಹಾಕಿದ ಮೂರನೇ ಓವರ್’ನ 5ನೇ ಎಸೆತ ಈ ಚರ್ಚೆಗೆ ಮೂಲ ಕಾರಣ. ಉಮೇಶ್ ಹಾಕಿದ ಎಸೆತವನ್ನು ಅಲೆಕ್ಸ್ ಹೇಲ್ಸ್ ಎತ್ತಿಬಾರಿಸಿದರು, ಆಗ ಟಿಮ್ ಸೌಥಿ ಅದ್ಭುತ ಕ್ಯಾಚ್ ಪಡೆದರು. ಕ್ಯಾಚ್ ಕುರಿತಂತೆ ಫೀಲ್ಡ್ ಅಂಪೈರ್ ಮೂರನೇ ಅಂಪೈರ್ ಮೊರೆ ಹೋದಾಗ ನಾಟೌಟ್ ಎಂದು ತೀರ್ಪು ಬಂತು.
ಈ ತೀರ್ಪಿನ ಕುರಿತಂತೆ ನಾಯಕ ವಿರಾಟ್ ಕೊಹ್ಲಿ ಹಾಗೂ ಟಿಮ್ ಸೌಥಿ ಅಚ್ಚರಿ ವ್ಯಕ್ತಪಡಿಸಿದರು. ಹೀಗಿತ್ತು ಆ ಕ್ಯಾಚ್, ಇದು ಔಟ್/ನಾಟೌಟ್ ನೀವೇ ತೀರ್ಮಾನಿಸಿ..
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.