
ಚೆನ್ನೈ(ಏ.09): ಕೋಲ್ಕತಾ ನೈಟ್ ರೈಡರ್ಸ್ ವಿರುದ್ದದ ಪಂದ್ಯದಲ್ಲಿ ಸುಲಭ ಟಾರ್ಗೆಟ್ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ರನ್ ಗೆಲುವು ಸಾಧಿಸಿದೆ. ಆರಂಭದಲ್ಲಿ ನಿಧಾನಗತಿಯಲ್ಲಿ ಬ್ಯಾಟ್ ಬೀಸಿದರೂ ನಿರಾಯಾಸವಾಗಿ ಗೆಲುವು ಸಾಧಿಸಿತು. ಕೆಕೆಆರ್ ತಂಡವನ್ನು 7 ವಿಕೆಟ್‌ಗಳಿಂದ ಮಣಿಸೋ ಮೂಲಕ CSK ಅಂಕಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನ ಸಂಪಾದಿಸಿದೆ.
ಗೆಲುವಿಗೆ 109 ರನ್ ಸುಲಭ ಟಾರ್ಗೆಟ್ ಪಡೆದ ಚೆನ್ನೈ ತಂಡಕ್ಕೆ ಕೆಕೆಆರ್ ದಾಳಿ ಎದುರಿಸುವುದು ಸುಲಭವಾಗಿರಲಿಲ್ಲ. ಡ್ಯೂ ಫ್ಯಾಕ್ಟರ್ ಇದ್ದರೂ ಕೆಕೆಆರ್ ಕೂಡ ಅದ್ಬುತ ದಾಳಿ ಸಂಘಟಿಸಿತು. ಹೀಗಾಗಿ ಶೇನ್ ವ್ಯಾಟ್ಸನ್ 17 ರನ್ ಸಿಡಿಸಿ ಔಟಾದರು. ಸುರೇಶ್ ರೈನಾ 14 ರನ್ ಸಿಡಿಸಿ ನಿರ್ಗಮಿಸಿದರು. ನಿಧಾನಗತಿಯಲ್ಲಿ ಬ್ಯಾಟಿಂಗ್ ಮುಂದುವರಿಸಿದ CSKಗೆ ಕಠಿಣ ಹಾದಿ ಎದುರಾಯಿತು.
ಫಾಫ್ ಡುಪ್ಲೆಸಿಸ್ ಹಾಗೂ ಅಂಬಾಟಿ ರಾಯುಡು ಜೊತೆಯಾಟದಿಂದ CSK ಚೇತರಿಸಿಕೊಂಡಿತು. ರಾಯುಡು 21 ರನ್ ಸಿಡಿಸಿ ಔಟಾದರು. ಕೇದಾರ್ ಜಾಧವ್ ಜೊತೆ ಸೇರಿದ ಫಾಪ್ ಡುಪ್ಲೆಸಿಸ್ CSK ಗೆಲುವನ್ನು ಖಚಿತ ಪಡಿಸಿದರು. ಡುಪ್ಲೆಸಿಸ್ ಅಜೇಯ ರನ್ ಸಿಡಿಸಿದರೆ, ಜಾಧವ್ ಅಜೇಯ ರನ್ ಭಾರಿಸಿದರು. ಈ ಮೂಲಕ CSK 17.2 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು. 7 ಭರ್ಜರಿ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.