
ಚೆನ್ನೈ(ಏ.23): ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಸನ್ ರೈಸರ್ಸ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅಲಭ್ಯರಾಗಿದ್ದು, ಭುವನೇಶ್ವರ್ ಕುಮಾರ್ ನಾಯಕತ್ವ ವಹಿಸಿದ್ದಾರೆ. ಇನ್ನು ಶಹಬ್ಬಾಸ್ ನದೀಮ್ ಬದಲು ಕನ್ನಡಿಗ ಮನೀಶ್ ಪಾಂಡೆ ತಂಡ ಸೇರಿಕೊಂಡಿದ್ದಾರೆ. ಇನ್ನು CSK ತಂಡದಲ್ಲಿ ಶಾರ್ದೂಲ್ ಠಾಕೂರ್ ಬದಲು ಹರ್ಭಜನ್ ಸಿಂಗ್ ತಂಡ ಸೇರಿಕೊಂಡಿದ್ದಾರೆ.
ಚಿದಂಬರಂ ಕ್ರೀಡಾಂಗಣಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಚೆನ್ನೈ ಸತತ 3ನೇ ಸೋಲು ತಪ್ಪಿಸಲು ಹೋರಾಟ ಮಾಡಲಿದೆ. ಇತ್ತ ಸನ್ರೈಸರ್ಸ್ ಹೈದರಾಬಾದ್ ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿದೆ. ಹೀಗಾಗಿ ಇಂದಿನ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ.
ಸತತ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಇದೀಗ ಸತತ 2 ಸೋಲು ಕಂಡಿದೆ. ಇಷ್ಟೇ ಅಲ್ಲ ಅಂಕಪಟ್ಟಿಯಲ್ಲೂ 2ನೇ ಸ್ಥಾನಕ್ಕೆ ಕುಸಿದಿದೆ. ಇದೀಗ ಸನ್ ರೈಸರ್ಸ್ ಹೈದರಾಬಾದ್ ವಿರುದ್ದ ಗೆಲುವು ಸಾಧಿಸಿ ಪ್ಲೇ ಆಫ್ ಸ್ಥಾನ ಖಚಿತಪಡಿಸೋ ಲೆಕ್ಕಾಚಾರದಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.