IPL 2019: ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್ ಆಯ್ಕೆ!

Published : Apr 12, 2019, 07:33 PM ISTUpdated : Apr 12, 2019, 07:34 PM IST
IPL 2019: ಟಾಸ್ ಗೆದ್ದ  ಡೆಲ್ಲಿ ಫೀಲ್ಡಿಂಗ್ ಆಯ್ಕೆ!

ಸಾರಾಂಶ

KKR ಹಾಗೂ ಡೆಲ್ಲಿ ನಡುವಿನ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ. ಕೋಲ್ಕತಾ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ  DC  ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡದ ಬದಲಾವಣೆ ಏನು? ಇಲ್ಲಿದೆ ವಿವರ.

ಕೋಲ್ಕತಾ(ಏ.12): ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ 12ನೇ ಆವೃತ್ತಿ ಐಪಿಎಲ್ ಟೂರ್ನಿಯ ಮೊದಲ ಮುಖಾಮುಖಿಯನ್ನು ಅಭಿಮಾನಿಗಳು ಇನ್ನೂ ಮರೆತಿಲ್ಲ. ಸೂಪರ್ ಓವರ್ ಮೂಲಕ ಗೆಲುವು ಸಾಧಿಸಿದ ಡೆಲ್ಲಿ ಇತಿಹಾಸ ರಚಿಸಿತ್ತು. ಇದೀಗ ಸೂಪರ್ ಓವರ್ ಸೇಡು ತೀರಿಸಿಕೊಳ್ಳಲು KKR ಸಜ್ಜಾಗಿದೆ. ಈಗಾಗಲೇ ಟಾಸ್ ಗೆದ್ದಿರುವ ಡೆಲ್ಲಿ ಫೀಲ್ಡಿಂಗ್ ಆಯ್ಕೆ ಮಾಡಿದೆ.

 

 

6ರಲ್ಲಿ 4 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಕೆಕೆಆರ್‌, ಗೆಲುವಿನ ಓಟ ಮುಂದುವರಿಸುವ ವಿಶ್ವಾಸದಲ್ಲಿದೆ. ತಂಡದ ಯಶಸ್ಸಿನಲ್ಲಿ ರಸೆಲ್‌ ಪಾತ್ರ ನಿರ್ಣಾಯಕವೆನಿಸಿದೆ.  ಮತ್ತೊಂದೆಡೆ ಡೆಲ್ಲಿ 6 ಪಂದ್ಯಗಳಿಂದ 6 ಅಂಕ ಗಳಿಸಿದ್ದು, ಈ ಪಂದ್ಯದಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಅಗ್ರ 5ರಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದೆ.  ಇಂದಿನ ಪಂದ್ಯ ಆ್ಯಂಡ್ರೆ ರಸೆಲ್ ಹಾಗೂ ಡೆಲ್ಲಿ ವೇಗಿ ಕಾಗಿಸೋ ರಬಾಡ ನಡುವಿನ ಹೋರಾಟ ಎಂದೇ ಬಿಂಬಿತವಾಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

U19 ಏಷ್ಯಾಕಪ್, 150 ರನ್‌ಗೆ ಪಾಕಿಸ್ತಾನ ಆಲೌಟ್ ಮಾಡಿದ ಟೀಂ ಇಂಡಿಯಾಗೆ 90 ರನ್ ಗೆಲುವು
ಬೊಂಡಿ ಬೀಚ್ ಗುಂಡಿನ ದಾಳಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಕ್ರಿಕೆಟಿಗ ವಾನ್, ಭಯಾನಕ ಘಟನೆ